ಬಸವನಬಾಗೇವಾಡಿ: ತಾಲೂಕಿನ ಅರಳಿಚಂಡಿ ಗ್ರಾಮದಲ್ಲಿ ನ. ೧೧ ರಂದು ಸಂಜೆ ೪ ಗಂಟೆಗೆ ವೀರರಾಣಿ ಕಿತ್ತೂರು ಚನ್ನಮ್ಮ ಜಯಂತೋತ್ಸವ ಹಾಗೂ ವಿವಿಧ ಕಾಮಗಾರಿಗಳ ಭೂಮಿ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಸಾನಿಧ್ಯವನ್ನು ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಇಂಗಳೇಶ್ವರದ ಚನ್ನಬಸವ ಸ್ವಾಮೀಜಿ, ಬಸವನಬಾಗೇವಾಡಿಯ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ವಹಿಸುವರು.
ಅಧ್ಯಕ್ಷತೆಯನ್ನು ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಐ.ಸಿ.ಪಟ್ಟಣಶೆಟ್ಟಿ ವಹಿಸುವರು. ಸಚಿವ ಶಿವಾನಂದ ಪಾಟೀಲ ಉದ್ಘಾಟಿಸುವರು. ಮುಖ್ಯಅತಿಥಿಗಳಾಗಿ ಶಾಸಕರಾದ ವಿಜಯಾನಂದ ಕಾಶಪ್ಪನವರ, ರಾಜುಗೌಡ ಪಾಟೀಲ, ಬಾಗಲಕೋಟ ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ, ಜೆಡಿಎಸ್ ಮುಖಂಡ ಅಪ್ಪುಗೌಡ ಪಾಟೀಲ, ವ್ಹಿಡಿಸಿಸಿ ಬ್ಯಾಂಕಿನ ನಿರ್ದೇಶಕ ಚಂದ್ರಶೇಖರಗೌಡ ಪಾಟೀಲ, ಸಿಪಿಐ ಶರಣಗೌಡ ಗೌಡರ, ಅಖಿಲ ಭಾರತೀಯ ಲಿಂಗಾಯತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಬಿರಾದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ತಾಲೂಕು ಪಂಚಮಸಾಲಿ ಸಮಾಜ ಅಧ್ಯಕ್ಷ ಬಸವರಾಜ ಗೊಳಸಂಗಿ, ಮುಖಂಡರಾದ ಸಂಗಮೇಶ ಓಲೇಕಾರ, ಶರಣಪ್ಪ ಬಳ್ಳಾವೂರ, ಎಪಿಎಂಸಿ ಮಾಜಿ ಅಧ್ಯಕ್ಷ ಶೇಖರ ಗೊಳಸಂಗಿ, ಇಂಗಳೇಶ್ವರ ಗ್ರಾಪಂ ಮಾಜಿ ಅಧ್ಯಕ್ಷ ಭೀಮನಗೌಡ ಪಾಟೀಲ, ಇಂಗಳೇಶ್ವರ ಗ್ರಾಪಂ ಅಧ್ಯಕ್ಷ ಬನ್ನೆಪ್ಪ ಡೋಣೂರ, ಇಂಗಳೇಶ್ವರ ಪಿಕೆಪಿಎಸ್ ಅಧ್ಯಕ್ಷ ಶಿವಾನಂದ ನಡಕಟ್ಟಿ, ಗ್ರಾಪಂ ಸದಸ್ಯರಾದ ಪ್ರಕಾಶ ದೇಸಾಯಿ, ಚೇತನಾ ಹುಡೇದ, ಲಕ್ಷ್ಮೀ ಶಾಖಾಪುರ, ಶ್ರೀಶೈಲ ಚಾಂದಕವಟೆ, ಮಲಕಾಜಿ ಕಲಬುರ್ಗಿ ಆಗಮಿಸುವರು.
Related Posts
Add A Comment