Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವನಬಾಗೇವಾಡಿಯಲ್ಲಿ ದೀಪಾವಳಿ ಹಬ್ಬಕ್ಕೆ ಭರದ ಸಿದ್ದತೆ
(ರಾಜ್ಯ ) ಜಿಲ್ಲೆ

ಬಸವನಬಾಗೇವಾಡಿಯಲ್ಲಿ ದೀಪಾವಳಿ ಹಬ್ಬಕ್ಕೆ ಭರದ ಸಿದ್ದತೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp


–ಸುಮಂಗಲಾ ಹುದ್ದಾರ
ಬಸವನಬಾಗೇವಾಡಿ: ಮುಂಗಾರು-ಹಿಂಗಾರು ಮಳೆ ಸರಿಯಾಗಿ ಬಾರದೇ ಇರುವದರಿಂದ ಬರದ ಛಾಯೆಯಲ್ಲಿಯೇ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಲು ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಜನರು ಭರದಿಂದ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಪಟ್ಟಣದಲ್ಲಿ ಕೆಲ ದಿನಗಳಿಂದ ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಹೊಸ ಬಟ್ಟೆ, ಸೀರೆ ಖರೀದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಟ್ಟೆ ಅಂಗಡಿಗಳಲ್ಲಿ ಕಂಡು ಬರುತ್ತಿದ್ದಾರೆ. ದೀಪಾವಳಿ ಹಬ್ಬ ಶನಿವಾರದಿಂದ ಆರಂಭವಾಗುತ್ತಿರುವುದರಿಂದಾಗಿ ಶುಕ್ರವಾರ ಬಟ್ಟೆ ಅಂಗಡಿ ಸೇರಿದಂತೆ ಹಬ್ಬಕ್ಕೆ ಬೇಕಾದ ಸಾಮಗ್ರಿಗಳನ್ನು ಖರೀದಿಸಲು ವಿವಿಧೆಡೆಗಳಿಂದ ಹೆಚ್ಚು ಜನರು ಆಗಮಿಸಿದ್ದು ಕಂಡು ಬಂತು.
ದೀಪಾವಳಿ ಹಬ್ಬಕ್ಕೆ ಬೇಕಾದ ಪೂಜಾ ಸಾಮಗ್ರಿಗಳು, ಆಕಾಶ ಬುಟ್ಟಿ, ಹೊಸ ಬಟ್ಟೆ ಸೇರಿದಂತೆ ಇನ್ನೀತರ ವಸ್ತುಗಳನ್ನು ಖರೀದಿಸುವಲ್ಲಿ ಜನರು ತುಂಬಾ ಬ್ಯುಸಿಯಾಗಿದ್ದಾರೆ. ದೀಪಾವಳಿ ಹಬ್ಬವನ್ನು ಎಲ್ಲ ಜನರು ಆಚರಿಸಲು ಸಿದ್ದಗೊಳ್ಳುತ್ತಿದ್ದಾರೆ. ವರ್ಷಕ್ಕೊಮ್ಮೆ ಬರುವ ಈ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಿಸಲು ಕಳೆದ ಹಲವು ದಿನಗಳಿಂದಲೇ ಜನರು ತಮ್ಮ ಮನೆ, ಅಂಗಡಿ-ಮುಂಗಟ್ಟುಗಳ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದಾರೆ. ಸಂಭ್ರಮದ ದೀಪಾವಳಿ ಹಬ್ಬಕ್ಕೆ ಕ್ಷಣ ಗಣನೆ ಆರಂಭವಾಗಿದೆ.
ವಾಹನ ಹೊಂದಿರುವ ಮಾಲೀಕರು ತಮ್ಮ ವಾಹನಗಳಿಗೆ ಬಣ್ಣ, ತಹರೇವಾರಿ ಹೂ ಸೇರಿದಂತೆ ಅಲಂಕಾರಿಕ ವಸ್ತುಗಳನ್ನು ಖರೀದಿಸುವಲ್ಲಿ ನಿರತರಾಗಿದ್ದರು. ಗ್ಯಾರೇಜುಗಳಲ್ಲಿಯೂ ವಾಹನಗಳಿಗೆ ಹಬ್ಬಕ್ಕಾಗಿ ತಯಾರಿ ಮಾಡಿಸುವುದು ಕಂಡುಬಂದಿತ್ತು.
ಶನಿವಾರ ನೀರು ತುಂಬುವ ಹಬ್ಬದಿಂದ ಆರಂಭವಾಗುವ ದೀಪಾವಳಿ ಹಬ್ಬ ಐದು ದಿನಗಳ ಕಾಲ ನಡೆಯಲಿದೆ. ಭಾನುವಾರ ಬೆಳಗ್ಗೆ ನರಕ ಚತುದರ್ಶಿ ಮೂಹರ್ತ ಇರುವದರಿಂದಾಗಿ ಬೆಳಗ್ಗೆ ಬೇಗನೆ ಎದ್ದು ಮಕ್ಕಳು, ಪುರುಷರು ಎಣ್ಣೆ ಹಚ್ಚಿಕೊಂಡು ಸ್ನಾನ ಮಾಡಿ ಹೆಣ್ಣುಮಕ್ಕಳಿಂದ ಆರತಿ ಮಾಡಿಸಿಕೊಳ್ಳುತ್ತಾರೆ. ಈ ಸಲ ದೀಪಾವಳಿ ಅಮವಾಸ್ಯೆ ಭಾನುವಾರ ಮಧ್ಯಾನ್ಹ ಆರಂಭವಾಗಿ ಸೋಮವಾರ ಮಧ್ಯಾನ್ಹವರೆಗೆ ಇರುವದರಿಂದಾಗಿ ಕೆಲವೆಡೆ ಭಾನುವಾರ, ಕೆಲವೆಡೆ ಸೋಮವಾರ ದೀಪಾವಳಿ ಅಮವಾಸ್ಯೆ ಮಾಡುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. ಮಂಗಳವಾರ ಬಲಿಪಾಡ್ಯಮಿ ಇದೆ. ದೀಪಾವಳಿ ಹಬ್ಬದಲ್ಲಿ ಬಗೆ ಬಗೆಯ ಸಿಹಿ ತಿನಿಸುಗಳನ್ನು ಜನರು ಸವಿಯುತ್ತಾರೆ.
ದೀಪಾವಳಿ ಹಬ್ಬದ ಲಕ್ಷ್ಮೀ ಪೂಜೆ ವಿಶೇಷವಾಗಿ ಚೆಂಡು ಹೂ ಸೇರಿದಂತೆ ವಿವಿಧ ತರಹದ ಹೂಗಳು ಮಾರುಕಟ್ಟೆ ಬರುತ್ತವೆ. ಚೆಂಡು ಹೂ ಈ ಸಲ ಸರಿಯಾಗಿ ಮಳೆ ಬಾರದೇ ಇರುವದರಿಂದಾಗಿ ಇದರ ಬೆಲೆ ದುಬಾರಿಯಾಗುವ ಸಾಧ್ಯತೆಯಿದೆ. ಉಳಿದ ಹೂಗಳು ತುಟ್ಟಿಯಾಗುವ ಸಾಧ್ಯತೆಯಿದೆ. ಹಣ್ಣು-ಹಂಪಲ ದರವೂ ಜಾಸ್ತಿಯಾಗಬಹುದು. ಅಂಗಡಿಗಳಲ್ಲಿ ತಹರೇವಾರಿ ಆಕಾಶಬುಟ್ಟಿಗಳು ಮಾರಾಟಕ್ಕೆ ಬಂದಿವೆ. ಆಕಾಶ ಬುಟ್ಟಿಗಳನ್ನು ಜನರು ಖರೀದಿ ಮಾಡುವದು ಕಂಡುಬಂದಿತ್ತು.
ನೀರು ತುಂಬುವ ಹಬ್ಬದ ದಿನದಿಂದಲೇ ತಮ್ಮ ತಮ್ಮ ಮನೆ, ಅಂಗಡಿಗಳ ಮುಂದೆ ಆಕಾಶ ಬುಟ್ಟಿ ಹಾಕುವ ಜೊತೆಗೆ ದೀಪಗಳನ್ನು ಇಟ್ಟು ದೀಪಾವಳಿ ಆಚರಿಸುತ್ತಾರೆ. ದೀಪಾವಳಿ ಹಬ್ಬವು ಎಲ್ಲರ ಜೀವನದಲ್ಲಿ ಅಂಧಕಾರವನ್ನು ತೊಳೆದು ಹಾಕಿ ಜೀವನದಲ್ಲಿ ಹೊಸ ಬೆಳಕು ಮೂಡಿಸಿಕೊಳ್ಳಬೇಕೆಂಬ ಸಂದೇಶ ನೀಡುತ್ತದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳ ಜೀವನ ಬಂಗಾರದ ಜೀವನ :ಕುರಂದವಾಡೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.