ಬಸವನಬಾಗೇವಾಡಿ: ಸರ್ಕಾರಿ, ಅನುದಾನಿತ ಮತ್ತು ಮಾನ್ಯತೆ ಪಡೆದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರಿಗೆ ನ. ೧೬ ರಂದು ಪಟ್ಟಣದಲ್ಲಿ ತಾಲೂಕು ಮಟ್ಟದ ಸಹ-ಪಠ್ಯ ಚಟುವಟಿಕೆ ಸ್ಪರ್ಧೆ ಹಮ್ಮಿಕೊಂಡಿದೆ. ಈ ಸ್ಪರ್ಧೆಯಲ್ಲಿ ಶಿಕ್ಷಕ ಬಾಂಧವರು ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕ್ರಮ ವಹಿಸಬೇಕೆಂದು ಕ್ಷೇತ್ರಶಿಕ್ಷಣಾಧಿಕಾರಿ ವಸಂತ ರಾಠೋಡ ಹೇಳಿದರು.
ಪಟ್ಟಣದ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ಸಿಆರ್‌ಸಿ, ಬಿಆರ್‌ಪಿಗಳ ಸಭೆಯಲ್ಲಿ ಮಾತನಾಡಿದ ಅವರು, ಒಬ್ಬ ಶಿಕ್ಷಕ ಒಂದು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸಲು ಅವಕಾಶವಿದೆ. ಪ್ರಥಮ ಸ್ಥಾನ ಪಡೆದ ಶಿಕ್ಷಕರು ಮಾತ್ರ ಮುಂದಿನ ಹಂತಕ್ಕೆ ಅರ್ಹನಾಗುತ್ತಾರೆ.ಯಾವುದೇ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುವ ಶಿಕ್ಷಕರು ಆ ವಿಷಯದಲ್ಲಿ ಮತ್ತೆ ಸ್ಪರ್ಧಿಸಲು ಅರ್ಹರಾಗುವುದಿಲ್ಲ. ಆದರೆ ಇತರೇ ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶವಿದೆ. ಈ ಸಲ ಜನಪದ ಹಾಡು, ಆಶುಭಾಷಣ, ಪ್ರಬಂಧ, ಚಿತ್ರಕಲೆ, ರಸಪ್ರಶ್ನೆ ಸ್ಪರ್ಧೆಗಳಿವೆ. ಈ ಸಹ-ಪಠ್ಯ ಚಟುವಟಿಕೆಗಳ ಸ್ಪರ್ಧೆಯಲ್ಲಿ ಭಾಗವಹಿಸುವ ಶಿಕ್ಷಕರು ತಾಲೂಕಿನ ನೋಡಲ್ ಅಧಿಕಾರಿ ಬಿಆರ್‌ಪಿ ಎಂ.ವ್ಹಿ.ಗಬ್ಬೂರ ಅವರಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕೆಂದರು.
ಸಭೆಯಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಪಿ.ಯು.ರಾಠೋಡ, ಶಿಕ್ಷಣ ಸಂಯೋಜಕ ಜಿ.ಎ.ಗಣಿಯವರ, ಬಿ.ಆರ್‌ಪಿಗಳು, ಸಿಆರ್‌ಪಿಗಳು ಇದ್ದರು.
Related Posts
Add A Comment