ಬಾಗಲಕೋಟ: ೨೦೨೩-೨೪ ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ವಿವಿಧ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ವಿಜೇತರಾಗಿರುವುದು ಅತ್ಯಂತ ಹೆಮ್ಮೆಯ ವಿಷಯ. ಆರೋಗ್ಯಕರ ದೇಹದಲ್ಲಿ ಆರೋಗ್ಯಕರ ಮನಸ್ಸು ಎಂದ ವಿವೇಕಾನಂದರ ಮಾತಿನಂತೆ ವಿದ್ಯಾರ್ಥಿ ಸಮೂಹ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಆರೋಗ್ಯವಂತರಾಗುವುದು ಅಗತ್ಯವಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಅಧ್ಯಯನದ ಜೊತೆಗೆ ಕ್ರೀಡೆಗೂ ಮಹತ್ವ ನೀಡಬೇಕು’ ಎಂದು ಬಿ.ವಿ.ವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಅವರು ಹೇಳಿದರು.
೨೦೨೩-೨೪ ನೇ ಶೈಕ್ಷಣಿಕ ವರ್ಷದ ವಿವಿಧ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದ ಅವರು ‘ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದಲ್ಲಿ÷ಓದಿನ ಜೊತೆಗೆ ಕ್ರೀಡೆಗೂ ಮಹತ್ವ ನೀಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಮತ್ತು ಅಧ್ಯಾಪಕರಿಗೆ ಅನುಕೂಲವಾಗಲೆಂದು ಸುಸಜ್ಜಿತ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾ ಅಂಕಣಗಳನ್ನು ಹಾಗೂ ಸ್ವಿಮ್ಮಿಂಗ್‌ಪೂಲ್ ಸ್ಥಾಪಿಸಲಾಗಿದೆ. ವಿದ್ಯಾರ್ಥಿಗಳು ಈ ಸೌಲಭ್ಯದ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಹೇಳಿದರು.
ವಿದ್ಯಾರ್ಥಿಗಳು ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾಲಯಗಳ ಕ್ರೀಡಾಕೂಟಗಳಿಗೆ ಮತ್ತು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯಗಳ ಕ್ರೀಡಾಕೂಟಗಳಿಗೆ ಆರು ವಿದ್ಯಾರ್ಥಿಗಳು ಆಯ್ಕೆಯಾಗಿ ಕಾಲೇಜಿಗೆ ಕೀರ್ತಿ ತಂದಿರುವರು. ಕಾಲೇಜಿನ ಕ್ರೀಡಾ ಕಾರ್ಯದರ್ಶಿ ಡಾ.ಸಂತೋಷ ಶೀಲವಂತ ಮತ್ತು ದೈಹಿಕ ನಿರ್ದೇಶಕ ಡಾ.ವಿಜಯಕುಮಾರ ಹಿರೇಮಠ ಕ್ರೀಡಾಕೂಟಗಳ ನೇತೃತ್ವ ವಹಿಸಿದ್ದರು.
ಕ್ರೀಡಾಕೂಟಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಈ ಸಂದರ್ಭದಲ್ಲಿ ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಎಮ್.ಸಜ್ಜನ (ಬೇವೂರ), ಕಟ್ಟಡ ವಿಭಾಗದ ಕಾರ್ಯಾಧ್ಯಕ್ಷ ಮಹೇಶ ಕಕರಡ್ಡಿ, ಮೆಡಿಕಲ್ ಕಾಲೇಜ್ ಪ್ರಾಚಾರ್ಯ ಡಾ.ಅಶೋಕ ಮಲ್ಲಾಪೂರ, ವೈದ್ಯಕೀಯ ಅಧೀಕ್ಷಕಿ ಡಾ.ಭುವನೇಶ್ವರಿ ಯಳಮಲಿ, ಡಾ. ಶೀವಕುಮಾರ ಸೊಲಬನ್ನವರ್ ಮತ್ತು ಡಾ.ದಿಲೀಪ ನಾಟೆಕರ್ ಉಪಸ್ಥಿತರಿದ್ದರು.
Related Posts
Add A Comment