ವಿಜಯಪುರ: ಭಾರತೀಯ ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಅವರು ಆಯ್ಕೆ ಆಗಿರುವ ಹಿನ್ನೆಲೆಯಲ್ಲಿ ಶುಕ್ರವಾರ ನಗರದ ಶಿವಾಜಿ ವೃತ್ತದಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ ಅವರ ಅಭಿಮಾನಿಗಳು ಸಂಭ್ರಮಾಚರಣೆ ಆಚರಿಸಿದರು.
ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಪರ ಹಾಗೂ ಬಿಜೆಪಿ ಪರ ಜೈಕಾರ ಹಾಕಿದ ಅಭಿಮಾನಿಗಳು ಮತ್ತು ಕಾರ್ಯಕರ್ತರು ಪಟಾಕಿ ಹಚ್ಚಿ, ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮಾಜಿ ಉಪಮೇಯರ್ ಗೋಪಾಲ ಘಟಕಾಂಬಳೆ, ಮಾಜಿ ಕಾರ್ಪೊರೇಟರ್ ಅಪ್ಪು ಸಜ್ಜನ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು
Related Posts
Add A Comment