ವಿಜಯಪುರ: ಒನಕೆ ಓಬವ್ವ ಸ್ವಾಮಿನಿಷ್ಠೆ, ಸಮಯ ಸ್ಫೂರ್ತಿ ಮತ್ತು ತ್ಯಾಗದ ತ್ರಿವೇಣಿ ಸಂಗಮ. ಸಾಮಾನ್ಯ ಗೃಹಿಣಿಯೊಬ್ಬಳು ಅಸಾಮಾನ್ಯ ಸಾಹಸ ತೋರಿದ ರೀತಿ ಎಲ್ಲರಿಗೂ ಪ್ರೇರಕವಾಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಒನಕೆ ಓಬವ್ವ ಜಯಂತಿ ಹಾಗೂ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನದ ನಿಮಿತ್ತ ರಾಷ್ಟ್ರೀಯ ಶಿಕ್ಷಣ ದಿನವನ್ನು ಉದ್ದೇಶಿಸಿ ಮಾತನಾಡಿದರು.
ಓಬವ್ವ ಉತ್ತಮ ಸಂಸ್ಕೃತಿ, ಸಂಸ್ಕಾರ ಹೊಂದಿದ್ದು, ಅವಳ ಆಚಾರ-ವಿಚಾರ, ನಡೆ-ನುಡಿಗಳ ಪರಿಶುದ್ಧತೆ ಮತ್ತು ಕಾಯಕನಿಷ್ಠೆಯ ದೃಢಸಂಕಲ್ಪ ಇಂದಿನ ಮಹಿಳೆಯರಿಗೆ ಚೇತನಶಕ್ತಿಯಾಗಿದೆ ಎಂದು ಹೇಳಿದರು.
ಮುಖ್ಯ ಶಿಕ್ಷಕ ಸುರೇಶಗೌಡ ಬಿರಾದಾರ ಮಾತನಾಡಿ, ಅಜಾದ್ ಅವರು ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಮುಖ್ಯ ಪಾತ್ರ ವಹಿಸಿ,ಖಿಲಾಫತ್ ಚಳವಳಿಯ ಮುಂದಾಳತ್ವ ವಹಿಸಿಕೊಂಡಿದ್ದರು.ಅವರು ಶಿಕ್ಷಣ ಸಚಿವರಾಗಿದ್ದ ಸಮಯದಲ್ಲಿ’ರಾಷ್ಟ್ರೀಯ ಶಿಕ್ಷಣ ನೀತಿ’ ಯನ್ನು ಜಾರಿಗೆ ತಂದಿದ್ದರು. ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದರು ಎಂದು ಹೇಳಿದರು.
ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಂಸ್ಥೆಯ ಕಾರ್ಯದರ್ಶಿ ಸುನಂದಾ ಹುಣಶ್ಯಾಳ,
ಶಿಕ್ಷಕರಾದ ಎಂ ಎಸ್ ಪಾಪನಾಳಮಠ, ಜಯಶ್ರೀ ಬಂಗಾರಿ, ಬಸಮ್ಮ ವಡಗೇರಿ, ಮಧುಮತಿ ನಿಕ್ಕಂ, ರೂಪಾ ಶಹಾಪುರ, ಸರೋಜಿನಿ ಕಟ್ಟಿಮನಿ, ಭೀಮಾಶಂಕರ ಕೋರೆ, ಲಕ್ಷ್ಮೀ ಮೇತ್ರಿ, ರೇಣುಕಾ ಭಜಂತ್ರಿ, ವೀರೇಶ ಹುಣಶ್ಯಾಳ ಸೇರಿದಂತೆ ಮಕ್ಕಳು ಭಾಗವಹಿಸಿದ್ದರು.
ಮಕ್ಕಳು ಒನಕೆ ಓಬವ್ವ ಹಾಗೂ ಮೌಲಾನಾ ಆಜಾದ್ ಅವರ ವೇಷಧಾರಿಗಳಾಗಿ ಮಾತನಾಡಿದರು.
Related Posts
Add A Comment