ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ,ಮೂಲ ಸೌಲಭ್ಯ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ ಪಾಟೀಲ ಅವರು ನ.೧೪ ರಿಂದ ನ.೧೬ರವರೆಗೆ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ನವೆಂಬರ್ ೧೪ರ ಸಂಜೆ ಬೆಂಗಳೂರಿನಿಂದ ಹೊರಟು, ರಾತ್ರಿ೧೧:೪೫ಕ್ಕೆ ವಿಜಯಪುರಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.
ನವೆಂಬರ್ ೧೫ರ ಬೆಳಿಗ್ಗೆ ೯ ರಿಂದ ಸಂಜೆ ೫ಗಂಟೆಯವರೆಗೆ ಜಿಲ್ಲೆಯ ಬರಪೀಡಿತ ತಾಲೂಕುಗಳಿಗೆ ಭೇಟಿ ನೀಡಿ, ಬರ ನಿರ್ವಹಣೆ ಕುರಿತು ಕೈಗೊಂಡ ಕ್ರಮಗಳ ಪರಿಶೀಲನೆ ನಡೆಸುವರು.
ಅಂದು ಸಂಜೆ ೫ ಗಂಟೆಗೆ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲ ಶಾಸಕರು,ಸಂಸದರು, ಜಿಲ್ಲಾ ಮತ್ತು ತಾಲೂಕ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲೆಯ ವಿವಿಧ ತಾಲೂಕಗಳ ಬರ ಪರಿಸ್ಥಿತಿ ಹಾಗೂ ಬರ ನಿರ್ವಹಣೆ ಕುರಿತು ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ. ಅಂದು ವಿಜಯಪುರದಲ್ಲಿ ವಾಸ್ತವ್ಯ ಮಾಡುವರು.
ನವೆಂಬರ್ ೧೬ರ ಸಂಜೆ ೪:೩೦ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Related Posts
Add A Comment