ವಿಜಯಪುರ: ಚುನಾವಣೆಗಳು ಪ್ರಜಾಪ್ರಭುತ್ವನ್ನು ಗಟ್ಟಿಗೊಳಿಸುತ್ತವೆ. ಈ ಪ್ರಕ್ರಿಯೆಯಲ್ಲಿ ಎಲ್ಲರೂ ಪಾಲ್ಗೊಂಡು ತಮ್ಮ ಹಕ್ಕು ಚಲಾಯಿಸಬೇಕು ಎಂದು ತಿಕೋಟಾ ಬಿ. ಎಲ್. ಡಿ. ಇ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಪ್ರಕಾಶ ಸಿದ್ದಾಪೂರ ಹೇಳಿದ್ದಾರೆ.
ತಿಕೋಟಾ ಪಟ್ಟಣದಲ್ಲಿರುವ ಬಿ. ಎಲ್. ಡಿ. ಇ ನರ್ಸಿಂಗ್ ಕಾಲೇಜಿನಲ್ಲಿ ಗುರುವಾರ ಚುನಾವಣೆ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ರಸಪ್ರಶ್ನೆ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಚುನಾವಣೆ ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅವರು, ಮತದಾನ ಪ್ರತಿಯೊಬ್ಬರ ಹಕ್ಕು. ಎಲ್ಲರೂ ನರ್ಸಿಂಗ್ ವಿದ್ಯಾರ್ಥಿಗಳೂ ಕೂಡ ಈ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಿ ಮತದಾನ ಪ್ರಮಾಣ ಹೆಚ್ಚಿಗೆ ಮಾಡಲು ಕಾರ್ಯೋನ್ಮುಖರಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ನರ್ಸಿಂಗ್ ತರಗತಿಯ ಮೊದಲನೇ ಸೆಮಿಸ್ಟರ್ ಸಂಯೋಜಕಿ ಗೀತಾಂಜಲಿ ಕೊಣ್ಣೂರ, ರಾಣುಬಾಯಿ ಸೂರ್ಯವಂಶಿ ಮುಂತಾದವರು ಉಪಸ್ಥಿತರಿದ್ದರು.
ತಿಕೋಟಾ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ಈ ನಡೆದ ಈ ಕಾರ್ಯಕ್ರಮವನ್ನು ರಸಪ್ರಶ್ನೆ ಸ್ಪರ್ಧೆಯ ಸಂಚಾಲಕ ಎಂ. ಬಿ. ತಡಲಗಿ ನಡೆಸಿಕೊಟ್ಟರು.
ಈ ಕಾರ್ಯಕ್ರಮದಲ್ಲಿ ತಲಾ ಇಬ್ಬರಂತೆ ಒಟ್ಟು 10 ತಂಡಗಳಲ್ಲಿ 20 ಪಾಲ್ಗೊಂಡರು. ಒಟ್ಟು ಆರು ಸುತ್ತುಗಳಲ್ಲಿ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕನ್ನಡ, ಇತಿಹಾಸ, ಅರ್ಥಶಾಸ್ತ್ರ, ಪ್ರಚಲಿತ ವಿದ್ಯಮಾನಗಳು, ಭೂಗೋಳ, ಭಾರತೀಯ ಸಂವಿಧಾನದಂಥ ನಾನಾ ವಿಷಯಗಳ ಕುರಿತು ಪ್ರಶ್ನೆಗಳನ್ನು ಕೇಳಲಾಯಿತು.
ಈ ರಸಪ್ರಶ್ನೆಯಲ್ಲಿ ಬೋರವ್ವ ಗಾಣಿಗೇರ್ ಮತ್ತು ಉಷಾ ಕುಂಬಾರ ಜೋಡಿ ಪ್ರಥಮ, ಶ್ರೇಯಾ ವಾಲಿಕಾರ ಮತ್ತು ಅಶ್ವಿನಿ ಮಾದೇಗಾರ ಜೋಡಿ ದ್ವಿತೀಯ ಸ್ಥಾನ ಪಡೆದರು.
Subscribe to Updates
Get the latest creative news from FooBar about art, design and business.
Related Posts
Add A Comment

