Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂಡಿ ಭಾಗದ ೭ಸಾವಿರ ಹೆಕ್ಟೆರ್ ಲಿಂಬೆ ಬೆಳೆಹಾನಿಗೆ ಪರಿಹಾರಕ್ಕೆ ಕ್ರಮ
(ರಾಜ್ಯ ) ಜಿಲ್ಲೆ

ಇಂಡಿ ಭಾಗದ ೭ಸಾವಿರ ಹೆಕ್ಟೆರ್ ಲಿಂಬೆ ಬೆಳೆಹಾನಿಗೆ ಪರಿಹಾರಕ್ಕೆ ಕ್ರಮ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಿಲ್ಲಾ ಉಸ್ತುವಾರಿ ಸಚಿವರಿಂದ ಬರಪೀಡಿತ ಪ್ರದೇಶಗಳ ವೀಕ್ಷಣೆ-ಪರಿಶೀಲನೆ

ವಿಜಯಪುರ: ಬೃಹತ್ ಮತ್ತು ಮದ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ ಪಾಟೀಲ ಅವರು ಜಿಲ್ಲೆಯ ಬರಪೀಡಿತ ತಾಲೂಕು ವಿಜಯಪುರ, ಇಂಡಿ, ಚಡಚಣ, ದೇವರ ಹಿಪ್ಪರಗಿ, ಮುದ್ದೇಬಿಹಾಳ ಹಾಗೂ ಬಸವನ ಬಾಗೇವಾಡಿ ತಾಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಬರ ನಿರ್ವಹಣೆ ಕುರಿತು ಪರಿಶೀಲನೆ ಹಾಗೂ ಜನ- ಜಾನುವಾರು, ಕುಡಿಯುವ ನೀರು, ಮೇವಿನ ಪರಿಸ್ಥಿತಿ, ನರೇಗಾ ಯೋಜನೆ ಕಾಮಗಾರಿ, ಗ್ರಾಮೀಣ ಪ್ರದೇಶದವರಿಗೆ ಉದ್ಯೋಗ ಸೃಜನೆ ಸೇರಿದಂತೆ ಜಿಲ್ಲೆಯ ಬರ ಪರಿಸ್ಥಿತಿ ಕುರಿತು ವೀಕ್ಷಣೆ ಮಾಡಿ ಪರಿಶೀಲನೆ ನಡೆಸಿದರು.
ರೇವಣಸಿದ್ದೇಶ್ವರ ಏತ ನೀರಾವರಿ ಕಾಮಗಾರಿಯ ಮುಳವಾಡ ಎರಡನೇ ಹಂತದ ಏತ ನೀರಾವರಿ ಕಾಮಗಾರಿಯ ತಿಡಗುಂದಿ ಹತ್ತಿರವಿರುವ ೪೮ಕಿ.ಮಿ. ಪ್ರಗತಿಯಲಿರುವ ಜಾಕ್‌ವೆಲ್ ಕಾಮಗಾರಿಯನ್ನು ವೀಕ್ಷಣೆ ಮಾಡಿ ಜಾಕ್‌ವೆಲ್‌ನಿಂದ ೧೯ ಕೆರೆಗಳು ತುಂಬಿ ಹೊರ್ತಿ, ಇಂಚಗೇರಿ, ಜಿಗಜಿವಣಿ, ಗುಂದವಾನ, ಸಾತಲಗಾಂವ್ ಹಾಗೂ ಸುತ್ತಮುತ್ತಲಿನ ಸುಮಾರು ೫೦ ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.
೧೮ ತಿಂಗಳೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಕಾಲಾವಕಾಶವಿದ್ದು ಅವಧಿ ಪೂರ್ವ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಚಿಸಿದರು.
ಈ ಭಾಗದಲ್ಲಿ ಕುಡಿಯುವ ನೀರಿನ ತೊಂದರೆಯಿದ್ದು, ಈ ಕಾಮಗಾರಿ ಪೂರ್ಣವಾದ ನಂತರ ಈ ಭಾಗದ ೧೯ ಕೆರೆಗಳು ತುಂಬಿ ಹೊರ್ತಿ, ಇಂಚಗೇರಿ, ಜಿಗಜಿವಣಿ, ಗುಂದವಾನ, ಸಾತಲಗಾಂವ್, ಕೆರೂರ, ದೇವರ ನಿಂಬರಗಿ ಸೇರಿದಂತೆ ಸುತ್ತಮುತ್ತಲಿನ ಸುಮಾರು ೫೦ ಗ್ರಾಮಗಳಿಗೆ ಕುಡಿಯುವ ನೀರಿನ ಸೌಲಭ್ಯ ಹಾಗೂ ೨೮ ಸಾವಿರ ಹೆಕ್ಟೇರ ಪ್ರದೇಶ ಭೂಮಿ ನೀರಾವರಿ ಒಳಪಡಲಿದೆ ಜೊತೆಗೆ ಅಂತರ್ಜಲ ಮಟ್ಟ ಕೂಡ ಹೆಚ್ಚಾಗಲಿದ್ದು ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದರು.
ಗಿರಿಮಲ್ಲಪ್ಪ ಚಂದ್ರಕಾಂತ ಇವರು ೧ ಎಕರೆ ೪ ಗುಂಟೆ ಜಮೀನಿನಲ್ಲಿ ಬೆಳೆದ ಲಿಂಬೆ ಬೆಳೆ ಹಾನಿ ವೀಕ್ಷಣೆ ನಡೆಸಿ, ಈ ಭಾಗದಲ್ಲಿ ೭ಸಾವಿರ ಹೆಕ್ಟೆರ್ ಲಿಂಬೆ ಬೆಳೆ ಹಾನಿಯಾಗಿದ್ದು, ಸೂಕ್ತ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಚಡಚಣ ತಾಲೂಕಿನ ಇಂಚಗೇರಿ ಗ್ರಾಮದ ಬೀರಪ್ಪ ಅರವತ್ತಿ ಅವರ ಬೆಳೆದ ತೊಗರಿ ಬೆಳೆ ಜಮೀನಿಗೆ ಭೇಟಿ ನೀಡಿ ವೀಕ್ಷಣೆ ಮಾಡಿದರು. ತೊಗರಿ ಬೆಳೆ ಹಾನಿಯಾದ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಂಡರು. ಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸಿ ಪರಿಹಾರ ನೀಡಲು ಸೂಚಿಸಿದರು.
ಹೊರ್ತಿ ಗ್ರಾಮದ ಭೀಮಾಶಂಕರ ಬಾಹುರಾಯ ಪೂಜಾರಿ ಕಬ್ಬು ಬೆಳೆ ಹಾನಿ ಹಾಗೂ ಸಾವಳಸಂಗ ನರೆಗಾ ಯೋಜನೆಯಡಿ ಕಾಮಗಾರಿ ಪರಿಶೀಲನೆ ನಡೆಸಿದರು ಮತ್ತು ಸಾವಳಸಂಗ ಅರಣ್ಯ ಪ್ರದೇಶದಲ್ಲಿ ಸಸಿ ನೆಟ್ಟರು. ಅದೇ ಗ್ರಾಮದ ಶ್ರೀಮತಿ ನೀಲವ್ವ ರೇವಗೊಂಡ ಪಾಟೀಲ ಇವರು ಬೆಳೆದಿರುವ ಸೂರ್ಯಕಾಂತಿ ಬೆಳೆ ಮಳೆ ಇಲ್ಲದೆ ಒಣಗಿರುವುದನ್ನು ವೀಕ್ಷಣೆ ಮಾಡಿದರು.
ಇಂಡಿ ತಾಲೂಕಿನ ಹಂಜಗಿ ಕೆರೆ ವೀಕ್ಷಣೆ ಮಾಡಿದರು. ಹಂಜಗಿಯಿಂದ ಆಗಮಿಸಿದ ಸಚಿವರು ತಾಂಬಾದಲ್ಲಿ ರೈತರಿಗೆ ಮೇವಿನ ಕಿಟ್ಟನ್ನು ವಿತರಿಸಿದರು. ಕೊಣ್ಣೂರಿನಲ್ಲಿ ತೊಗರಿ ಬೆಳೆ, ಹೂವಿನ ಹಿಪ್ಪರಗಿಯಲ್ಲಿ ಕಬ್ಬು ಹಾಗೂ ಬಸವನ ಬಾಗೇವಾಡಿ ತಾಲೂಕಿನ ಯರನಾಳದಲ್ಲಿ ಈರುಳ್ಳಿ ಬೆಳೆ ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ಜಿಲ್ಲಾಧಿಕಾರಿ ಟಿ. ಭೂಬಾಲನ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವನೆ, ಇಂಡಿ ಉಪವಿಭಾಗಾಧಿಕಾರಿ ಅಬೀದ ಗದ್ಯಾಳ, ವಿಜಯಪುರ ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026
    In (ರಾಜ್ಯ ) ಜಿಲ್ಲೆ
  • ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026
    In ದಿನಪತ್ರಿಕೆ
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.