ಬಸವನಬಾಗೇವಾಡಿ: ಕೋವಿಡ್ ಸಂದರ್ಭದಲ್ಲಿ ಆದ ಸಾವು ನೋವುಗಳು ಹಣವೊಂದಿದ್ದರೆ ಏನೆಲ್ಲಾ ಸಾಧಿಸಬಹುದು ಎಂಬ ಅಹಂ ದೂರು ಮಾಡಿದೆ. ಆರೋಗ್ಯದ ಮಹತ್ವ ಏನೆಂಬುದು ತಿಳಿಸಿಕೊಟ್ಟಿದ್ದು ಇಂದು ಕಾಲಕಾಲಕ್ಕೆ ತಪಾಸಣೆಗೆ ಒಳಗಾಗುವ ಮನಸ್ಥಿತಿ ಹೆಚ್ಚಿದೆ ಎಂದು ಜವಳಿ ಕಬ್ಬು ಅಭಿವೃದ್ಧಿ ಸಕ್ಕರೆ ನಿರ್ದೇಶನಾಲಯ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಪಟ್ಟಣದ ಅಕ್ಕನಾಗಮ್ಮ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡ ಚಗನಿದೇವಿ ನೇಮಿಚಂದ ಅಗರವಾಲ ಅವರ ಸ್ಮರಣಾರ್ಥ ಲೋಕನಾಥ್ ನೇಮಿಚಂದ್ರ ಅಗರವಾಲ್ ಅವರ ಪರಿವಾರ ಹಾಗೂ ಆಯುಷ್ ಆಸ್ಪತ್ರೆ ವಿಜಯಪುರ ಮತ್ತು ರಾಷ್ಟ್ರೀಯ ಬಸವ ಸೈನ್ಯ ಸಂಘಟನೆಯ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲಾ ಸಂಪತ್ತುಗಳಿಗಿಂತ ಆರೋಗ್ಯ ಸಂಪತ್ತು ಇಂದು ಮನುಕುಲಕ್ಕೆ ಮುಖ್ಯವಾಗಿದೆ. ಕೋವಿಡ್ ಸಂದರ್ಭದಲ್ಲಿ ಹಲವಾರು ಜೀವಗಳನ್ನು ನಾವು ನೀವೆಲ್ಲರೂ ಕಳೆದುಕೊಂಡೆವು. ಈ ನಿಟ್ಟಿನಲ್ಲಿ ಇಂತಹ ಉಚಿತ ಆರೋಗ್ಯ ಶಿಬಿರಗಳನ್ನು ಏರ್ಪಡಿಸುವುದರ ಮುಖಾಂತರ ಬಡವರು ರೈತರು ಕೃಷಿ ಕಾರ್ಮಿಕರಿಗೆ ಅನುಕೂಲವಾಗುತ್ತದೆ. ಇಂತಹ ಶಿಬಿರದಲ್ಲಿ ಜನರು ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ನಿಟ್ಟಿನಲ್ಲಿ ಇಂತಹ ಶಿಬಿರಗಳು ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿವೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಹಕಾರಿ ಮಹಾಮಂಡಲದ ನಿರ್ದೇಶಕರಾದ ಈರಣ್ಣ ಪಟ್ಟಣಶೆಟ್ಟಿ ಕರ್ನಾಟಕ ರಾಜ್ಯ ವಿಮಾ ಸಹಕಾರಿ ಮಹಾಮಂಡಳದ ಅಧ್ಯಕ್ಷ ಶಿವನಗೌಡ ಬಿರಾದಾರ ಮಾತನಾಡಿದರು.
ಅಧ್ಯಕ್ಷತೆಯನ್ನು ಬಸವೇಶ್ವರ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರಾದ ಲೋಕನಾಥ್ ಅಗರವಾಲ ವಹಿಸಿದ್ದರು. ಕಾರ್ಯಕ್ರಮದ ಸಾನಿಧ್ಯವನ್ನು ವಿರಕ್ತ ಮಠದ ಸಿದ್ದಲಿಂಗ ಶ್ರೀಗಳು ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮಿಗಳು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಅತಿಥಿಗಳಾಗಿ ಬಸಣ್ಣ ಕಲ್ಲೂರ್ ಪುರಸಭೆ ಸದಸ್ಯ ನೀಲಪ್ಪ ನಾಯಕ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್ ಹಾರಿವಾಳ್ ಡಿಎಸ್‌ಪಿ ಕರುಣಾಕರಶೆಟ್ಟಿ ಉಪಸ್ಥಿತರಿದ್ದರು.
ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷರಾದ ಶಂಕರಗೌಡ ಬಿರಾದಾರ ನಿರೂಪಿಸಿದರು. ಸಂಗಮೇಶ ಓಲೆಕಾರ್ ಸ್ವಾಗತಿಸಿದರು. ರವಿ ರಾಠೋಡ್ ವಂದಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

