ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬಿಎಲ್.ಡಿ.ಇ. ಸಂಸ್ಥೆಯ ಎ.ವ್ಹಿ.ಎಸ್. ಆಯುರ್ವೇದ ಮಹಾವಿದ್ಯಾಲಯ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ, ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತರ ಫೆಡರೇಶನ್, ನೆಹರು ಯುವ ಕೇಂದ್ರ ಹಾಗೂ ಎನ್.ಎಸ್.ಎಸ್. ಘಟಕ ಇವರ ಸಂಯುಕ್ತಾಶ್ರಯದಲ್ಲಿ ನವೆಂಬರ್ ೧೮ ರ ಬೆಳಿಗ್ಗೆ ೧೦ ಗಂಟೆಗೆ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎವ್ಹಿಎಸ್ ಆಯುರ್ವೇದ ಮಹಾವಿದ್ಯಾಲಯದ ವಾಗ್ಭಟ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ
ಯುವಜನೋತ್ಸವದ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ(ಯತ್ನಾಳ) ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ, ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಸಂಸದರಾದ ರಮೇಶ ಜಿಗಜಿಣಗಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ಆರ್. ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ ಸಿ.ಎಸ್.ನಾಡಗೌಡ, ವಿಠ್ಠಲ ಕಟಕಧೋಂಡ, ಭೀಮನಗೌಡ(ರಾಜುಗೌಡ) ಪಾಟೀಲ, ಅಶೋಕ ಮನಗೂಳಿ, ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಾಣೆ, ಬಿ.ಎಲ್.ಡಿ.ಇ, ಎ.ವ್ಹಿ.ಎಸ್ ಮಹಾವಿದ್ಯಾಲಯ ಪ್ರಾಚಾರ್ಯರಾದ ಡಾ. ಸಂಜಯ ಕಡ್ಲಿಮಟ್ಟಿ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಯುವಜನೋತ್ಸವದಲ್ಲಿ ಜಾನಪದ ನೃತ್ಯ(ತಂಡ), ಜಾನಪದ ಗೀತೆ(ತಂಡ), ಜಾನಪದ ನೃತ್ಯ (ವೈಯಕ್ತಿಕ), ಜಾನಪದ ಗೀತೆ(ವೈಯಕ್ತಿಕ), ಕಥೆ ಬರೆಯುವುದು, ಪೋಸ್ಟರ್ ಮೇಕಿಂಗ್ ಘೋಷಣೆ, ಛಾಯಾಚಿತ್ರ ಸ್ಫರ್ಧೆಗಳನ್ನು ಆಯೋಜಿಸಲಾಗಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
