ವಿಜಯಪುರ: ಡಿಸೆಂಬರ್ ೦೩ ರಂದು ಆಚರಿಸಲಾಗುವ ವಿಶ್ವ ವಿಕಲಚೇತನರ ದಿನಾಚರಣೆ ಹಿನ್ನೆಲೆಯಲ್ಲಿ ನವೆಂಬರ್ ೧೭ ರಂದು ಬೆಳಿಗ್ಗೆ ೧೦ ಗಂಟೆಗೆ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ.
ಈ ಸಭೆಗೆ ಜಿಲ್ಲೆಯ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು ಹಾಗೂ ವಿಕಲಚೇತನರು ಭಾಗವಹಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕನಕದಾಸ ಬಡಾವಣೆಯ ಜಿಲ್ಲಾ ಪಂಚಾಯತ್ ಅವರಣದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯನ್ನು ಹಾಗೂ ದೂರವಾಣಿ ಸಂಖ್ಯೆ : ೦೮೩೫೨-೭೯೬೦೬೦ ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ರಾಜಶೇಖರ ದೈವಾಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
