ಮುದ್ದೇಬಿಹಾಳ: ತಾಲೂಕಿನ ಬಿದರಕುಂದಿ ಬಳಿಯ ತಿರುವಿನಲ್ಲಿ ಕೆಕೆಆರ್‌ಟಿಸಿ ಬಸ್ ಮತ್ತು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತ ದುರ್ದೈವಿಯನ್ನು ಸಂಗಣ್ಣ. ಚಂದಪ್ಪ. ತುರಡಗಿ(೩೩) ಎಂದು ಗುರುತಿಸಲಾಗಿದೆ. ೯ ವರ್ಷದ ತಂಗಿಯ ಮಗಳೊಂದಿಗೆ ಎಚ್‌ಎಫ್ ಡಿಲಕ್ಸ್ ಬೈಕ್ ಮೂಲಕ ಮುದ್ದೇಬಿಹಾಳ ಪಟ್ಟಣಕ್ಕೆ ಬರುವಾಗ ಬಿದರಕುಂದಿ ಬಳಿಯ ತಿರುವಿನಲ್ಲಿ ವಿಜಯಪುರಕ್ಕೆ ತೆರಳುವ ವಿಜಯಪುರ-ಮುದ್ದೇಬಿಹಾಳ ಬಸ್ ಗೆ ಮುಖಾಮುಖಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನೆಯ ನಂತರ ದಾರಿಹೋಕ ವಾಹನ ಸವಾರರು ಉಪಚರಿಸಿ ಅಂಬುಲೆನ್ಸ್ ಗೆ ಕರೆ ಮಾಡಿ ತಾಲೂಕು ಸರ್ಕಾರಿ ಆಸ್ಪತ್ರಗೆ ರವಾನಿಸಿದ್ದಾರೆ. ದುರ್ಘಟನೆಯಲ್ಲಿ ಗಾಯಾಳುವಿಗೆ ಬಲಗಾಲು ನುಜ್ಜು ನುಜ್ಜಾಗಿದ್ದು ವಿಪರೀತ ರಕ್ತಸ್ರಾವವಾಗಿದ್ದರಿಂದ ಪ್ರಥಮ ಚಿಕಿತ್ಸೆ ಬಳಿಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ ಎನ್ನಲಾಗಿದೆ.
ಜೊತೆಯಲ್ಲಿದ್ದ ಬಾಲಕಿಗೆ ತಲೆ ಒಡೆದು ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಬಸ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Related Posts
Add A Comment