ವಿಜಯಪುರ: ಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಡಬಲ್ ಡಿಜಿಟ್ ಸಹ ಕ್ರಾಸ್ ಮಾಡುವುದಿಲ್ಲ. ಒಂದಿಬ್ಬರು ಆಯ್ಕೆಯಾಗಬಹುದು ಅಷ್ಟೇ. ಜನರಿಗೆ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಸಂಪೂರ್ಣ ಕಡಿಮೆಯಾಗಿದೆ ಎಂದು ಮಾಜಿ ಸಚಿವ ಬಿ. ಶ್ರೀರಾಮಲು ಭವಿಷ್ಯ ನುಡಿದರು.
ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ವಿಜಯಪುರ ಕಾರ್ಯಕರ್ತರೊಡನೆ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಜನರಿಗೆ ಕಾಂಗ್ರೆಸ್ ಮೋಸದ ಬಗ್ಗೆ ಅರಿವಾಗಿದೆ ಎಂದರು.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸುವ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ಧೃಡಸಂಕಲ್ಪ ಮಾಡಬೇಕು, ಇದು ಕೇವಲ ಒಬ್ಬರಿಂದ ಆಗುವ ಕೆಲಸವಲ್ಲ, ಇದೊಂದು ಸಾಮೂಹಿಕ ಪ್ರಯತ್ನ, ಎಲ್ಲ ಕಾರ್ಯಕರ್ತರು ಹೊಸ ಹುಮ್ಮಸ್ಸಿನಿಂದ ದುಡಿಯಬೇಕು. ಕರ್ನಾಟಕ ರಾಜ್ಯದಿಂದ ಹೆಚ್ಚಿನ ಸಂಸದರನ್ನು ಆಯ್ಕೆ ಮಾಡಿ ಕಳುಹಿಸುವ ಮೂಲಕ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು ಎಂದು ಕರೆ ನೀಡಿದರು.
ಪ್ರಸ್ತುತ ಸಂಸದರಾಗಿರುವ ರಮೇಶ ಜಿಗಜಿಣಗಿ ಅವರು ಸಹ ಹಿರಿಯ ರಾಜಕೀಯ ಧುರೀಣರು, ಲಕ್ಷಾಂತರ ಕಾರ್ಯಕರ್ತರ ಪ್ರೀತಿಯನ್ನು ಸಂಪಾದಿಸಿದ್ದಾರೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕುಚಬಾಳ, ಲಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಚಂದ್ರಶೇಖರ ಕವಟಗಿ, ವಿಭಾಗೀಯ ಸಂಘಟನಾ ಮಹಾಮಂತ್ರಿ ಪ್ರಕಾಶ ಅಕ್ಕಲಕೋಟ, ನಗರ ಮಂಡಳ ಅಧ್ಯಕ್ಷ ಮಳುಗೌಡ ಪಾಟೀಲ, ಮುಖಂಡರಾದ ವಿವೇಕಾನಂದ ಡಬ್ಬಿ, ಮಲ್ಲಿಕಾರ್ಜುನ ಜೋಗೂರ, ಬಸರಾಜ ಬಿರಾದಾರ, ಸಂಜು ಐಹೊಳಿ, ಶಿವರುದ್ರ ಬಾಗಲಕೋಟ, ಬಿಜೆಪಿ ಮಹಾನಗರ ಪಾಲಿಕೆ ಸದಸ್ಯರು, ಮಹಿಳಾ ಮೋರ್ಚಾ ಸೇರಿದಂತೆ ವಿವಿಧ ಮಂಡಳಗಳ ಪದಾಧಿಕಾರಿಗಳು, ಕಾರ್ಯಕರ್ತರು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

