ಬಸವನ ಬಾಗೇವಾಡಿ: ವಿದ್ಯಾರ್ಥಿಗಳು ಸ್ಪರ್ಧಿಸುವ ಗುಣ ಬೆಳಸಿಕೊಳ್ಳಬೇಕು, ಸೋಲು, ಗೆಲುವು ಏನೇ ಇರಲಿ ಸ್ಫರ್ಧಿಸುವ ಮನೋಭಾವನೆ ಮುಖ್ಯ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಬಿಹೊಸಮನಿ ಹೇಳಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತದಾರರ ಸಾಕ್ಷರತಾ ಸಂಘದ ಅಡಿಯಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ೨೦೨೩-೨೪ನೇ ಸಾಲಿನ ತಾಲೂಕು ಮಟ್ಟದ ವಿವಿಧ ಸ್ಫರ್ಧೆಗಳು ಮಹಾವಿದ್ಯಾಲಯದಲ್ಲಿ ನಡೆದವು.
ಪ್ರಬಂಧ ಸ್ಪರ್ಧೆ, ಬಿತ್ತಿಚಿತ್ರ ಸ್ಫರ್ಧೆ ಮತ್ತು ರಸಪ್ರಶ್ನೆ ಸ್ಪರ್ಧೆಗಳು ಜರುಗಿದವು. ಈ ಸ್ಪರ್ಧೆಗಳಲ್ಲಿ ತಾಲೂಕಿನ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ಪರ್ಧೆಗಳ ನಂತರ ಫಲಿತಾಂಶ ಪ್ರಕಟಣೆ ಮಾಡುತ್ತಾ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಾಂಶುಪಾಲರು ಮಾತನಾಡಿದರು. ಈ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಲ್ಲಿ ನಡೆಯುವ ಸ್ಪರ್ಧೆಗಳಲ್ಲಿ ಭಾಗವಹಿಸಲು ಅರ್ಹರಾಗುವರು. ಈ ಕಾರ್ಯಕ್ರಮದ ನೋಡಲ್ ಅಧಿಕಾರಿಯಾದ ಡಾ. ಎಚ್. ಎಂ ನಾಟಿಕಾರ ಅವರು ಪ್ರಾಸ್ತಾವಿಕ ನುಡಿಗಳನ್ನು ಹೇಳಿದರು.
ಡಾ ಯುವರಾಜ ಮಾದನಶೆಟ್ಟಿ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಡಾ. ಪ್ರಶಾಂತ ನಾಯಕ ಟಿ ಆರ್, ಡಾ ಬಸೀರಾಬಾನು ನಿಡಗುಂದಿ, ಡಾ ಶ್ರೀದೇವಿ ಜತ್ತಿ, ಶ್ರೀಮತಿ ವಿಜಯಲಕ್ಷ್ಮೀ, ಮಮದಾಪುರ, ಮಹಾದೇವಪ್ಪ ವಡ್ಡೊಡಗಿ ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

