ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಪಕ್ಷದ ಹೀನಾಯ ಸೋಲು ಕಂಡಿರುವುದರಿಂದ ಬೂತ್ ಮಟ್ಟದಿಂದ ಪಕ್ಷವನ್ನು ಕಟ್ಟಬೇಕಿದೆ. ಅಸಮಾಧಾನಗೊಂಡಿರುವ ಹಿರಿಯ ಶಾಸಕರ ಮನವೊಲಿಸಬೇಕಿದೆ. ಲೋಕಸಭೆ ಚುನಾವಣೆ ಬಿಜೆಪಿಗೆ ದೊಡ್ಡ ಸವಾಲಾಗಿದ್ದು ಕಳೆದ ಬಾರಿ 28 ಕ್ಷೇತ್ರಗಳ ಪೈಕಿ 25 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಆದರೆ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದರಿಂದ ಅಷ್ಟೇ ಸ್ಥಾನಗಳನ್ನು ಉಳಿಸಿಕೊಳ್ಳುವುದು ದೊಡ್ಡ ಸವಾಲಾಗಿದೆ.
ವಿರೋಧ ಪಕ್ಷದ ನಾಯಕರ ಆಯ್ಕೆಗೆ ಸಭೆ ನಡೆಯುತ್ತಿರುವಾಗ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀ ಕುಡಿಯುವುದಾಗಿ ಹೇಳಿ ಸಭೆಯಿಂದ ಹೊರನಡೆದಿದ್ದರು. ಇನ್ನು ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ಯಡಿಯೂರಪ್ಪ ಮತ್ತು ಅವರ ಕುಟುಂಬವನ್ನು ಉಲ್ಲೇಖಿಸಿ ಬಿಜೆಪಿ ಒಂದೇ ಕುಟುಂಬದ ಪಕ್ಷವಾಗಬಾರದು ಎಂದು ಹೇಳಿದರು.
ಕಳೆದ ವಾರ ಬಿಜೆಪಿ ಹೈಕಮಾಂಡ್ ಕರ್ನಾಟಕದ ರಾಜ್ಯಾಧ್ಯಕ್ಷರನ್ನಾಗಿ ಶಿಕಾರಿಪುರದ ಶಾಸಕ ಬಿ ವೈ ವಿಜಯೇಂದ್ರ ಅವರನ್ನು ನೇಮಕ ಮಾಡಿತು. ವಿಜಯೇಂದ್ರ ಬಿಜೆಪಿಯಲ್ಲಿ ಪ್ರಮುಖ ನಾಯಕನಾಗಿರುವ ಬಿ ಎಸ್ ಯಡಿಯೂರಪ್ಪ ಅವರ ಮಗ, ಬಿಎಸ್ವೈ ಕರ್ನಾಟಕದ ಮತ್ತೊಂದು ಪ್ರಬಲ ಲಿಂಗಾಯತ ಸಮುದಾಯದವರಾಗಿದ್ದಾರೆ.
224 ಸದಸ್ಯ ಬಲದ ವಿಧಾನಸಭೆಗೆ ಮೇ ತಿಂಗಳಿನಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸುವ ಮೂಲಕ ರಾಜ್ಯದಲ್ಲಿ ಸರ್ಕಾರ ನಡೆಸುತ್ತಿದೆ. ಕಾಂಗ್ರೆಸ್ 135, ಬಿಜೆಪಿ 66 ಮತ್ತು ಜೆಡಿಎಸ್ 19 ಸ್ಥಾನಗಳನ್ನು ಪಡೆದುಕೊಂಡಿತ್ತು.
Subscribe to Updates
Get the latest creative news from FooBar about art, design and business.
Related Posts
Add A Comment

