ಬಸವನಬಾಗೇವಾಡಿ: ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಎಸ್‌ಸಿ,ಎಸ್‌ಟಿ ಘಟಕದಲ್ಲಿ ವಿವಿಧ ಪದಾಧಿಕಾರಿಗಳನ್ನು ನೇಮಕ ಮಾಡುವ ಮೂಲಕ ಪಕ್ಷದ ಸಂಘಟನೆಗೆ ಮುಂದಾಗಿದ್ದು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದಿಂದ ಸ್ಪರ್ಧೆ ಮಾಡುವ ಅಭ್ಯರ್ಥಿ ಗೆಲುವಿಗಾಗಿ ಪಕ್ಷದ ಕಾರ್ಯಕರ್ತರು ಶ್ರಮಿಸುತ್ತಾರೆ ಎಂದು ಜಿಲ್ಲಾ ಕಾಂಗ್ರೆಸ್ ಪಕ್ಷದ ಎಸ್‌ಸಿ, ಎಸ್‌ಟಿ ಘಟಕದ ಜಿಲ್ಲಾಧ್ಯಕ್ಷ ರಮೇಶ ಬಿಜೆಪಿ ಪಕ್ಷ ದಲಿತ ವಿರೋಧ ಪಕ್ಷವಾಗಿದೆ. ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತ ಬಾಂಧವರಿಗೆ ಕಾಂಗ್ರೆಸ್ ಪಕ್ಷವು ಹೆಚ್ಚಿನ ಸ್ಥಾನಮಾನ ನೀಡಿದೆ. ಬಿಜೆಪಿ ಪಕ್ಷ ದಲಿತ ವಿರೋಧ ಪಕ್ಷವಾಗಿದೆ. ಅದಕ್ಕಾಗಿಯೇ ಕಳೆದ ವಿಧಾನಸಭೆ ಚುನಾವಣೆಯಲ್ಲಿ ದಲಿತ ಸಮುದಾಯದವರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿ ಹೆಚ್ಚು ಸ್ಥಾನಗಳು ಬರುವಂತೆ ಮಾಡಿದ್ದಾರೆ. ಬಿಜೆಪಿ ಪಕ್ಷವನ್ನು ತಿರಸ್ಕಾರ ಮಾಡಿದ್ದಾರೆ. ಇದೀಗ ಬಿಜೆಪಿಯು ಒಡೆದ ಮನೆಯಂತೆ ಆಗಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿಯೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಸ್ಥಾನಗಳು ಬರುವದು ನಿಶ್ಚಿತ ಎಂದರು.
ಕಾಂಗ್ರೆಸ್ ಪಕ್ಷವು ದಲಿತ ಸಮುದಾಯದವರಿಗೆ ಸಿಎಂ ಸ್ಥಾನ ನೀಡಬಹುದಿತ್ತಲ್ಲವೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಪಕ್ಷದ ಉನ್ನತ ಹುದ್ದೆಯಾದ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಲಾಗಿದೆ. ಜಿ.ಪರಮೇಶ್ವರ ಅವರು ಏಳು ವರ್ಷ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಹೀಗೆ ಹಲವಾರು ಉನ್ನತ ಸ್ಥಾನಮಾನಗಳನ್ನು ನಮ್ಮ ಪಕ್ಷವು ದಲಿತ ಸಮುದಾಯದವರಿಗೆ ನೀಡಿದೆ. ಮುಂಬರುವ ದಿನಗಳಲ್ಲಿ ಸಿಎಂ ಸ್ಥಾನವನ್ನು ನೀಡುವ ವಿಶ್ವಾಸವಿದೆ ಎಂದರು.
ಬ್ಲಾಕ್ ಕಾಂಗ್ರೆಸ್ ಎಸ್‌ಸಿ ಕಮಿಟಿ ಅಧ್ಯಕ್ಷ ಪರಶುರಾಮ ಜಮಖಂಡಿ ಮಾತನಾಡಿದರು.
ಸುದ್ದಿಗೋಷ್ಠಿಯಲ್ಲಿ ರವಿ ಮ್ಯಾಗೇರಿ, ನಾಗರಾಜ ಪಲ್ಲಾಪುರ, ಭೀಮಶಿ ಚಲವಾದಿ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment
