Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನೂತನ ಕಟ್ಟಡದಲ್ಲಿ ಪುರಸಭೆಕಚೇರಿ ಕಾರ್ಯಾರಂಭ
(ರಾಜ್ಯ ) ಜಿಲ್ಲೆ

ನೂತನ ಕಟ್ಟಡದಲ್ಲಿ ಪುರಸಭೆ
ಕಚೇರಿ ಕಾರ್ಯಾರಂಭ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಜೈನ್ ಪ್ಲಾಟ್‌ನಲ್ಲಿ ನಿರ್ಮಾಣಗೊಂಡಿರುವ ಪುರಸಭೆ ಕಾರ್ಯಾಲಯದ ನೂತನ ಕಟ್ಟಡದಲ್ಲಿ ಶನಿವಾರ ಸತ್ಯನಾರಾಯಣ ಪೂಜೆಯೊಂದಿಗೆ ಕಚೇರಿ ಕಾರ್ಯಾರಂಭಗೊಂಡಿತು.
ಪಟ್ಟಣದ ತೆಲಗಿ ರಸ್ತೆಯಲ್ಲಿ ಇದುವರೆಗೂ ಪುರಸಭೆ ಕಚೇರಿ ಕಟ್ಟಡದಲ್ಲಿ ಸಾರ್ವಜನಿಕರಿಗೆ ಪುರಸಭೆ ಸೇವೆ ಒದಗಿಸುತ್ತಿದೆ. ಇದೀಗ ವಿಶಾಲವಾದ ಪ್ರದೇಶದಲ್ಲಿ ಅಂದಾಜು ರೂ. ೨ ಕೋಟಿಕ್ಕೂ ಹೆಚ್ಚಿನ ವೆಚ್ಚದಲ್ಲಿ ನಿರ್ಮಾಣವಾಗಿರುವ ಭವ್ಯವಾದ ಪುರಸಭೆ ಕಚೇರಿಯ ನೂತನ ಕಟ್ಟಡದಲ್ಲಿ ಇಂದಿನಿಂದ ಜನರಿಗೆ ಸೇವೆ ಲಭ್ಯವಾಗಲಿದೆ.
ಬೆಳಗ್ಗೆ ೯ ಗಂಟೆಗೆ ಸತ್ಯನಾರಾಯಣ ಪೂಜೆಯು ಧಾರ್ಮಿಕ ವಿಧಿ ವಿಧಾನದೊಂದಿಗೆ ಪುರಸಭೆಯ ಎಲ್ಲ ಅಧಿಕಾರಿ ವರ್ಗ,ಸಿಬ್ಬಂದಿ, ಪುರಸಭೆ ಸದಸ್ಯರು, ಗಣ್ಯರ ಸಮ್ಮುಖದಲ್ಲಿ ನೆರವೇರಿತು. ಪೂಜೆ ನೆರವೇರಿದ ನಂತರ ಸ್ಥಳೀಯ ಪೂಜ್ಯರಾದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ, ಸಿದ್ದಲಿಂಗ ಸ್ವಾಮೀಜಿ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪುರಸಭೆ ಕಚೇರಿಯ ನೂತನ ಕಟ್ಟಡದಲ್ಲಿ ಹಿಂದೆ ಒಮ್ಮೆ ಪೂಜೆ ನೆರೇವರಿದೆ. ಇದೀಗ ಸಚಿವ ಶಿವಾನಂದ ಪಾಟೀಲ, ಜಿಲ್ಲಾಧಿಕಾರಿ, ಆಡಳಿತಾಧಿಕಾರಿ ಉಪವಿಭಾಗಾಧಿಕಾರಿ, ಪುರಸಭೆ ಸದಸ್ಯರ ಸರ್ವರ ಸಹಮತದೊಂದಿಗೆ ನೂತನ ಕಟ್ಟಡದಲ್ಲಿ ಸಾರ್ವಜನಿಕರಿಗೆ ಸೇವೆ ನೀಡಲು ಇಂದು ಪೂಜೆ ನೆರವೇರಿಸುವ ಮೂಲಕ ಕಾರ್ಯಾರಂಭ ಮಾಡಲಾಗುತ್ತಿದೆ. ಸುಂದರ, ವಿಶಾಲವಾದ ಪ್ರದೇಶದಲ್ಲಿ ನಿರ್ಮಾಣವಾಗಿರುವ ಕಟ್ಟಡವು ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಅನುಕೂಲವಾಗುತ್ತದೆ. ಇಂದಿನಿಂದಲೇ ನೂತನ ಕಟ್ಟಡದಲ್ಲಿ ಸಾರ್ವಜನಿಕರಿಗೆ ಸೇವೆ ನೀಡಲಾಗುತ್ತದೆ.ಸಾರ್ವಜನಿಕರು ನೂತನ ಪುರಸಭೆ ಕಟ್ಟಡಕ್ಕೆ ಬಂದು ತಮ್ಮ ಕಾರ್ಯಗಳನ್ನು ಮಾಡಿಕೊಳ್ಳಬೇಕು. ನೂತನ ಕಟ್ಟಡಕ್ಕೆ ಪುರಸಭೆ ಸ್ಥಳಾಂತರವಾಗಿರುವ ಕುರಿತು ಸಾರ್ವಜನಿಕರಿಗೆ ಗೊತ್ತಾಗುವಂತೆ ಪ್ರಚಾರ ಕೈಗೊಳ್ಳಲಾಗುವುದು ಎಂದರು.
ಪೂಜಾ ಕಾರ್ಯಕ್ರಮದಲ್ಲಿ ಪುರಸಭೆ ಸದಸ್ಯರಾದ ನಜೀರ ಗಣಿ, ಅಬ್ದುಲ್ ಚೌಧರಿ, ರವಿ ನಾಯ್ಕೋಡಿ, ಪ್ರವೀಣ ಪೂಜಾರಿ, ಅನ್ನಪೂರ್ಣ ಕಲ್ಯಾಣಿ, ಲಕ್ಷ್ಮೀಬಾಯಿ ಬೆಲ್ಲದ, ರೇಖಾ ಬೆಕಿನಾಳ, ಜಗದೇವಿ ಗುಂಡಳ್ಳಿ, ರೇಖಾ ಸೊನ್ನದ, ಮುಖಂಡರಾದ ಈರಣ್ಣ ಪಟ್ಟಣಶೆಟ್ಟಿ, ಬಿ.ಕೆ.ಕಲ್ಲೂರ, ಲೋಕನಾಥ ಅಗರವಾಲ, ಪುರಸಭೆ ವ್ಯವಸ್ಥಾಪಕ ವಿರೇಶ ಹಟ್ಟಿ, ಅಭಿಯಂತರ ಮಹಾದೇವಿ ಜಂಬಗಿ, ಆರೋಗ್ಯ ನಿರೀಕ್ಷಕ ಮಹೇಶ ಹಿರೇಮಠ, ಲೆಕ್ಖಿಗ ಗುರು ಮಾಗಾವಿ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!
    In (ರಾಜ್ಯ ) ಜಿಲ್ಲೆ
  • ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ
    In (ರಾಜ್ಯ ) ಜಿಲ್ಲೆ
  • ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲಕ್ಕೆ ಹೆಚ್ಚುವರಿ ಸಾರಿಗೆ ಕಾರ್ಯಚರಣೆ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ವಿಜಯಪುರದಲ್ಲಿ ಭೀಮಗಾಯನ
    In (ರಾಜ್ಯ ) ಜಿಲ್ಲೆ
  • ’ಶ್ರೀಗುರು ಮರುಳಾರಾದ್ಯ ಸಿರಿ’ ಪ್ರಶಸ್ತಿಗೆ ಈರಣ್ಣ ಝಳಕಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ಪಾದಯಾತ್ರಿಗಳಿಗೆ ಟೋಪಿ ವಿತರಣೆ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ
    In (ರಾಜ್ಯ ) ಜಿಲ್ಲೆ
  • ಗರಿಷ್ಠ ತಾಪಮಾನ: ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.