ವಿಜಯಪುರ: ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನವೆಂಬರ್ ೨೦ ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ನವೆಂಬರ್ ೨೦ರಂದು ಬೆಂಗಳೂರಿನಿಂದ ಹೊರಟು ಬೆಳಿಗ್ಗೆ ೧೧-೪೦ಕ್ಕೆ ವಿಜಯಪುರ ಸೈನಿಕ ಶಾಲೆ ಆವರಣ ಹೆಲಿಪ್ಯಾಡ್‌ಗೆ ಆಗಮಿಸಿ, ವಿಜಯಪುರ ನಗರದ ಸೋಲಾಪುರ ರಸ್ತೆಯ ಕಿತ್ತೂರು ಚನ್ನಮ್ಮ ನಗರದಲ್ಲಿರುವ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಆವರಣದಲ್ಲಿ ೭೦ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ಹಾಗೂ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಶತಮಾನೋತ್ಸವ ಭವನ ಉದ್ಘಾಟನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ ೩-೩೦ಕ್ಕೆ ವಿಜಯಪುರ ಸೈನಿಕ ಶಾಲೆ ಹೆಲಿಪ್ಯಾಡ್‌ದಿಂದ ಹೆಲಿಕ್ಯಾಪ್ಟರ್ ಮೂಲಕ ಮರು ಪ್ರಯಾಣ ಬೆಳೆಸಲಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
