ದೇವರಹಿಪ್ಪರಗಿ: ತಾಲ್ಲೂಕು ಆಡಳಿತ, ಪಟ್ಟಣ ಪಂಚಾಯಿತಿ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸಂವಿಧಾನ ದಿನಾಚರಣೆ ಜರುಗಿತು.
ಪಟ್ಟಣದ ಅಂಬೇಡ್ಕರ ವೃತ್ತದಲ್ಲಿ ಭಾನುವಾರ ತಹಶೀಲ್ದಾರ್ ಪ್ರಕಾಶ ಸಿಂದಗಿ ಸಂವಿಧಾನ ದಿನಾಚರಣೆ ಅಂಗವಾಗಿ ಸಂವಿಧಾನ ಪೀಠಿಕೆ ಓದುವುದರ ಮೂಲಕ ಪ್ರತಿಜ್ಞಾವಿಧಿ ಭೋಧಿಸಿ ಮಾತನಾಡಿದರು. ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠವಾದ ಸಂವಿಧಾನ ನಮ್ಮದಾಗಿದೆ. ಪ್ರತಿಯೊಂದು ಅಂಶಗಳು ನಮಗೆ ಮಾದರಿಯಾಗಿವೆ. ಸರ್ಕಾರ ನಡೆಸುವ ಪ್ರತಿಯೊಬ್ಬ ನಾಗರೀಕನಿಗೂ ಅನ್ವಯವಾಗುವ ಹಕ್ಕು ಮತ್ತು ಕರ್ತವ್ಯಗಳ ಕುರಿತು ಸಂವಿಧಾನ ಮಾಹಿತಿ ನೀಡುತ್ತದೆ. ಇಂತಹ ಸಂವಿಧಾನ ರಚನೆ ಮಾಡಿದ ಮಹನೀಯರೆಲ್ಲರಿಗೂ ನಾವು ಕೃತಜ್ಞರಾಗಿರಬೇಕು. ಸಂವಿಧಾನ ರಚನೆಯಲ್ಲಿ ಅಂಬೇಡ್ಕರ ಅವರ ಸೇವೆ ಶ್ಲಾಘನೀಯವಾಗಿದೆ. ಇಂತಹ ಸಂವಿಧಾನವನ್ನು ಸಂರಕ್ಷಣೆ ಮಾಡುವ ಕಾರ್ಯ ನಮ್ಮ ಮೇಲಿದೆ ಎಂದರು.
ತಾಲ್ಲೂಕು ಪಂಚಾಯಿತಿ ಇಓ ಭಾರತಿ ಚೆಲುವಯ್ಯ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಅಶೋಕ ಹೆಗಡೆ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಲ್.ಡಿ.ಮುಲ್ಲಾ, ಸದಸ್ಯರಾದ ರಮೇಶ ಮಸಬಿನಾಳ, ಶಾಂತಯ್ಯ ಜಡಿಮಠ, ಬಶೀರ್ ಅಹ್ಮದ್ ಮಳಖೇಡ, ಕಾಸುಗೌಡ ಬಿರಾದಾರ(ಜಲಕತ್ತಿ), ರಮೇಶ ಮ್ಯಾಕೇರಿ, ಭೀಮಪ್ಪ ಗುಡಿಮನಿ, ರಾಜಕುಮಾರ ಸಿಂದಗೇರಿ, ದಯಾನಂದ ರಾಠೋಡ, ಶಿಕ್ಷಕ ಎಸ್.ಆರ್.ಪಾಟೀಲ ಹಾಗೂ ಪಟ್ಟಣ ಪಂಚಾಯಿತಿ ಸಿಬ್ಬಂದಿ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

