ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಕಾಯಚಿಕಿತ್ಸಾ ವಿಭಾಗದ ವತಿಯಿಂದ ನಾನಾ ಚರ್ಮರೋಗ ಕಾಯಿಲೆಗಳಿಗಾಗಿ ನವೆಂಬರ್ 29 ರಿಂದ ಡಿಸೆಂಬರ್ 2ರ ವರೆಗೆ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿದೆ.
ನಾಲ್ಕು ದಿನ ನಡೆಯಲಿರುವ ಈ ಶಿಬಿರದಲ್ಲಿ ನಾನಾ ರೀತಿಯ ಚರ್ಮರೋಗಗಳಾದ ಭಂಗು, ಮೊಡವೆ, ಚಿಬ್ಬು, ಗಜಕರ್ಣ, ಇಸುಬು, ಅಲರ್ಜಿಯಿಂದ ಅಗುವ ತುರಿಕೆ ಮುಂತಾದ ದೀರ್ಘಕಾಲಿನ ಚರ್ಮರೋಗಳಿಗೆ ಉಚಿತವಾಗಿ ತಪಾಸಣೆ ನಡೆಸಲಾಗುವುದು. ಸಾರ್ವಜನಿಕರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿ ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಲಮಟ್ಟಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊ. ಸಂ: 9513397413, 7483278348 ಸಂಪರ್ಕಿಸಬಹುದಾಗಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
