ಅಂತಿಮ ವರ್ಷದ ವಾಣಿಜ್ಯ ವಿಭಾಗದ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಉತ್ತಮ ಸಾಧನೆ
ಆಲಮಟ್ಟಿ: ಸ್ಥಳೀಯ ಎಸ್.ವ್ಹಿ.ವ್ಹಿ. ಸಂಸ್ಥೆಯ ಎಂ.ಎಚ್.ಎಂ.ಕಲಾ ವಾಣಿಜ್ಯ ಪದವಿ ಮಹಾವಿದ್ಯಾಲಯವು ಕಳೆದ ಸೆಪ್ಟೆಂಬರ್, ಅಕ್ಟೋಬರ್ ತಿಂಗಳಲ್ಲಿ ನಡೆದ ವಾಣಿಜ್ಯ ವಿಭಾಗದ ಕೊನೆಯ ಪರೀಕ್ಷೆಯಲ್ಲಿ ನೂರಕ್ಕೆ ನೂರರಷ್ಟು ಅತ್ಯುತ್ತಮ ಫಲಿತಾಂಶ ಪಡೆದಿದೆ.
ಪರೀಕ್ಷೆಗೆ ಕುಳಿತ ಎಲ್ಲ ೨೩ ವಿದ್ಯಾರ್ಥಿ,ವಿದ್ಯಾರ್ಥಿನಿಯರು ಪಾಸಾಗಿದ್ದಾರೆ. ಅದರಲ್ಲಿ ೮ ಡಿಸ್ಟಿಂಕ್ಷನ್,೧೦ ಪ್ರಥಮ,೫ ದ್ವೀತಿಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಕುಮಾರಿ ಅಮೃತ ಬಳ್ಳೊಳ್ಳಿ ಶೇ ೯೦, ಕುಮಾರಿ ಗಾಯತ್ರಿ ಶಿಂಧೆ ಶೇ ೮೮, ಹಾಗೂ ಕುಮಾರಿ ಪಲ್ಲವಿ ಶಿವಣಗಿ ಶೇ ೮೮ ರಷ್ಟು ಅತಿ ಹೆಚ್ಚು ಅಂಕಗಳಿಸಿ ತೇರ್ಗಡೆಯಾಗಿದ್ದಾರೆ. ಒಟ್ಟಾರೆ ಈ ಬಾರಿ ಕಾಲೇಜಿಗೆ ಉತ್ತಮ ಫಲಿತಾಂಶ ಲಭಿಸಿದೆ.
ಅಂತಿಮ ವರ್ಷದ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ತೋರಿ ಕಾಲೇಜಿಗೆ ಕೀರ್ತಿ ತಂದಿರುವ ಪ್ರತಿಭಾವಂತ ಈ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಗದುಗಿನ ತೋಂಟದಾರ್ಯ ಮಠದ ಪೀಠಾಧಿಪತಿ ತೋಂಟದ ಡಾ.ಸಿದ್ದರಾಮ ಮಹಾಸ್ವಾಮಿಗಳು, ಸಂಸ್ಥೆಯ ಕಾರ್ಯದರ್ಶಿ ಶಿವಾನಂದ ಪಟ್ಟಣಶೆಟ್ಟರ, ಪ್ರಾಚಾರ್ಯ ಎಚ್.ಎನ್.ಕೆಲೂರ ಸೇರಿದಂತೆ ಕಾಲೇಜಿನ ಉಪನ್ಯಾಸಕ ಬಳಗ ಅಭಿನಂದಿಸಿದ್ದಾರೆ.

