Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಿ.೨೪ರ ವೃಕ್ಷಥಾನ್ ಹೆರಿಟೇಜ್ ರನ್ ಗೆ ಭಾರಿ ಬೆಂಬಲ
(ರಾಜ್ಯ ) ಜಿಲ್ಲೆ

ಡಿ.೨೪ರ ವೃಕ್ಷಥಾನ್ ಹೆರಿಟೇಜ್ ರನ್ ಗೆ ಭಾರಿ ಬೆಂಬಲ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಪರಿಸರ ಮತ್ತು ಪ್ರಾಚೀನ ಸ್ಮಾರಕಗಳ ಸಂರಕ್ಷಣೆ ಹಾಗೂ ಜಾಗೃತಿಗಾಗಿ ನಗರದಲ್ಲಿ ಡಿಸೆಂಬರ್ 24 ರಂದು ಆಯೋಜಿಸಲಾಗಿರುವ ವೃಕ್ಷಥಾನ್ ಹೆರಿಟೇಜ್ ರನ್- 2003 ಗೆ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ಈ ಓಟದಲ್ಲಿ ಪ್ರತಿಷ್ಠಿತ ಸೈನಿಕ ಶಾಲೆಯ 450 ವಿದ್ಯಾರ್ಥಿ ಮತ್ತು ಸಿಬ್ಬಂದಿ ಪಾಲ್ಗೋಳ್ಳಲಿದ್ದಾರೆ.
ಮ್ಯಾರಾಥಾನ್ ಕೋರ್ ಕಮಿಟಿಯ ಸಂಚಾಲಕ ಮುರಗೇಶ ಪಟ್ಟಣಶೆಟ್ಟಿ ನೇತೃತ್ವದಲ್ಲಿ ವಿರೇಂದ್ರ ಗುಚ್ಚಟ್ಟಿ, ಡಾ. ದೀಪಕ ಚವ್ಹಾಣ ಹಾಗೂ ಡಾ. ರಾಜು ಯಲಗೊಂಡ ಸೋಮವಾರ ಸೈನಿಕ ಶಾಲೆಯ ಪ್ರಾಚಾರ್ಯೆ ಗ್ರೂಪ್ ಕ್ಯಾಪ್ಟನ್ ಪ್ರತಿಭಾ ಬಿಸ್ಟ್ ಅವರನ್ನು ಬೇಟಿ ಮಾಡಿ ಹೆರಿಟೇಜ್ ರನ್ ಬಗ್ಗೆ ಮಾಹಿತಿ ನೀಡಿದರು. ಇದಕ್ಕೆ ಸ್ಪಂದಿಸಿದ ಪ್ರಾಂಶುಪಾಲರು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಅಲ್ಲದೇ, ಶಾಲೆಯ 450 ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಇದೇ ವೇಳೆ ಕೋರ್ ಕಮಿಟಿ ಸದಸ್ಯರು ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಬೇಟಿ ಮಾಡಿ ವೃಕ್ಷಥಾನ್‌ನಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಿದರು. ಇದಕ್ಕೆ ಸ್ಪಂದಿಸಿದ ಡಿವೈಎಸ್ಪಿ. ಸಿಪಿಐ, ಪಿಎಸ್‌ಐ ಮತ್ತಿತರ ಅಧಿಕಾರಿಗಳು ಕೂಡ ಈ ಓಟದಲ್ಲಿ ಪಾಲ್ಗೊಳ್ಳುವುದಾಗಿ ಭರವಸೆ ನೀಡಿದರು.
ಇದೇ ವೇಳೆ, ಕೋರ್ ಕಮಿಟಿ ಸದಸ್ಯರು ನಾನಾ ಶಿಕ್ಷಣ ಸಂಸ್ಥೆಗಳಿಗೂ ಭೇಟಿ ನೀಡಿ ವೃಕ್ಷಥಾನ್‌ನಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಿದರು.
ಮಲೆನಾಡು ಅಲ್ಟ್ರಾ ಮ್ಯಾರಾಥಾನ್ 50 ಕಿ.ಮೀ ನಲ್ಲಿ ಪಾಲ್ಗೊಂಡು ಗಮನ ಸೆಳೆದ ಕಮಿಟಿ ಸದಸ್ಯರು.
ಈ ಮದ್ಯ ಚಿಕ್ಕಮಗಳೂರು ಜಿಲ್ಲೆಯ ಮಳಂದೂರಿನಲ್ಲಿ ಶನಿವಾರ ನಡೆದ ಮಲೆನಾಡು ಅಲ್ಟ್ರಾ ಮ್ಯಾರಾಥಾನ್‌ನಲ್ಲಿ ಕೋರ್ ಕಮಿಟಿಯ ಸಂಕೇತ ಬಗಲಿ, ರಘು ಸಾಲೋಟಗಿ ಹಾಗೂ ಸಂದೀಪ ಮಡಗೊಂಡ ಗುಡ್ಡಗಾಡಿನಿಂದ ಕೂಡಿರುವ ರಸ್ತೆಯಲ್ಲಿ ಓಡಿ ಪೂರ್ಣಗೊಳಿಸುವ ಮೂಲಕ ಗಮನ ಸೆಳೆದಿದ್ದಾರೆ.
ಸಂಕೇತ ಬಗಲಿ ಮತ್ತು ರಘು ಸಾಲೋಟಗಿ ಅವರು 50 ಕಿ.ಮೀ ಹಾಗೂ ಸಂದೀಪ ಮಡಗೊಂಡ ಅವರು 30 ಕಿ.ಮೀ ಓಟದಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಕೇತ ಬಗಲಿ ಮತ್ತು ಸಂದೀಪ ಮಡಗೊಂಡ ಅವರನ್ನು ಇಂದು ಮಂಗಳವಾರ ವಿಜಯಪುರದಲ್ಲಿ ವೃಕ್ಷಥಾನ್ ಹೆರಿಟೇಜ್ ರನ್- 2023 ಕೋರ್ ಕಮಿಟಿ ವತಿಯಿಂದ ಸನ್ಮಾಹಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಡಾ. ಮಹಾಂತೇಶ ಬಿರಾದಾರ, ಮಲೆನಾಡು ಅಲ್ಟ್ರಾ ಮ್ಯಾರಾಥಾನ್‌ನಲ್ಲಿ ಸಂಕೇತ ಬಗಲಿ, ರಘು ಸಾಲೋಟಗಿ ಹಾಗೂ ಸಂದೀಪ ಮಡಗೊಂಡ ಪಾಲ್ಗೊಳ್ಳುವ ಮೂಲಕ ವಿಜಯಪುರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಸಾಕಷ್ಟು ಸವಾಲುಗಳನ್ನು ಹೊಂದಿರುವ ಮತ್ತು ದುರ್ಗಮ ಹಾದಿ ಹಾಗೂ ಕಾಡಿನಲ್ಲಿ ನಡೆಯುವ ಈ ಓಟದಲ್ಲಿ ಪಾಲ್ಗೊಂಡು ಸಂಪೂರ್ಣವಾಗಿ ಓಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಅಲ್ಲದೇ, ವೃಕ್ಷಥಾನ್ ಹೆರಿಟೇಜ್ ರನ್- 2023ಕ್ಕೆ ಮತ್ತಷ್ಟು ಜನ ಹೆಸರು ನೋಂದಾಯಿಸಿಕೊಳ್ಳಲು ಪ್ರೇರಣೆ ನೀಡಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಿವನಗೌಡ ಪಾಟೀಲ, ಸಂತೋಷ ಔರಸಂಗ, ಸೋಮಶೇಖರ ಸ್ವಾಮಿ, ರಾಜು ಯಲಗೊಂಡ, ವಿರೇಂದ್ರ ಗುಚ್ಚಟ್ಟಿ, ಅಪ್ಪು ಭೈರಗೊಂಡ, ಅಬಕಾರಿ ಇಲಾಖೆಯ ಉಪಆಯುಕ್ತ ಡಾ. ಸಂಗನಗೌಡ ಹೊಸಳ್ಳಿ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!
    In (ರಾಜ್ಯ ) ಜಿಲ್ಲೆ
  • ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ
    In (ರಾಜ್ಯ ) ಜಿಲ್ಲೆ
  • ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲಕ್ಕೆ ಹೆಚ್ಚುವರಿ ಸಾರಿಗೆ ಕಾರ್ಯಚರಣೆ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ವಿಜಯಪುರದಲ್ಲಿ ಭೀಮಗಾಯನ
    In (ರಾಜ್ಯ ) ಜಿಲ್ಲೆ
  • ’ಶ್ರೀಗುರು ಮರುಳಾರಾದ್ಯ ಸಿರಿ’ ಪ್ರಶಸ್ತಿಗೆ ಈರಣ್ಣ ಝಳಕಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ಪಾದಯಾತ್ರಿಗಳಿಗೆ ಟೋಪಿ ವಿತರಣೆ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ
    In (ರಾಜ್ಯ ) ಜಿಲ್ಲೆ
  • ಗರಿಷ್ಠ ತಾಪಮಾನ: ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.