ವಿಜಯಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ-ಅರೆ ಅಲೆಮಾರಿ ಪ್ರವರ್ಗ-೧ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ವಿದ್ಯಾಸಿರಿ ಉಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ದಿನಾಂಕ : ೧೦-೦೧-೨೦೨೪ ಕೊನೆಯ ದಿನವಾಗಿದ್ದು, ಆನ್‌ಲೈನ್ ವೆಬ್‌ಸೈಟ್ https://ssp.postmatric.karnataka.gov.in ಮೂಲಕ ಅರ್ಹ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆ ಸೇರಿದಂತೆ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ದೂ:೮೦೫೦೭೭೦೦೦೫, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ದೂ:೧೯೦೨ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
ವಿದ್ಯಾರ್ಥಿವೇತನ-ವಿದ್ಯಾಸಿರಿ- ಯೋಜನೆ: ಆನ್‌ಲೈನ್ ಅರ್ಜಿ ಆಹ್ವಾನ
Related Posts
Add A Comment
