ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಎಲ್ಲ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಡಿ.೩ ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ತ್ರಿಚಕ್ರ ವಾಹನಗಳ ಜಾಥಾ ಕಾರ್ಯಕ್ರಮ ನಡೆಯಲಿದ್ದು, ಬೆಳಿಗ್ಗೆ ೧೦ ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆಯುವ ದಿನಾಚರಣೆ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ. ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ(ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಬಿ.ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ ಸಿ.ಎಸ್.ನಾಡಗೌಡ, ವಿಠ್ಠಲ ಕಟಕದೊಂಡ, ಭೀಮನಗೌಡ(ರಾಜುಗೌಡ) ಬಸನಗೌಡ ಪಾಟೀಲ, ಅಶೋಕ ಮಲ್ಲಪ್ಪ ಮನಗೂಳಿ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
