ಸಿಂದಗಿ: ಸಂಸ್ಕಾರಯುತ ಶಿಕ್ಷಣವು ತಾಯಿ ಬೇರಾಗಿದ್ದು, ಮಕ್ಕಳು ಉತ್ತಮ ಸಂಸ್ಕಾರವನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ಆರಕ್ಷಕಿ, ಸಾಹಿತಿ ಶೈಲಶ್ರೀ ನ್ಯಾಮಣ್ಣವರ ಹೇಳಿದರು.
ಪಟ್ಟಣದ ನಾಗೂರ ಬಡಾವಣೆಯಲ್ಲಿರುವ ಸಮರ್ಥ ವಿದ್ಯಾವಿಕಾಸ ಸಂಸ್ಥೆಯ ಅಂಗ ಸಂಸ್ಥೆಯಾದ ವಿದ್ಯಾನಿಕೇತನ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಸುವರ್ಣ ಸಂಭ್ರಮದ ನಿಮಿತ್ಯವಾಗಿ ಹಮ್ಮಿಕೊಂಡ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರು ಮಕ್ಕಳಿಗೆ ಪ್ರೀತಿಯಿಂದ ಪಾಠ ಬೋಧಿಸುವ ಕಾರ್ಯದ ಜೊತೆಗೆ ಸ್ನೇಹ, ಪ್ರೀತಿ, ವಾತ್ಸಲ್ಯ ಮತ್ತು ಕರುಣೆಯನ್ನು ತೋರಿಸಿ ದೇಶದ ಉತ್ತಮ ಪ್ರಜೆಗಳನ್ನಾಗಿ ಮಾಡಬೇಕೆಂದರು.
ಈ ವೇಳೆ ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ ಅಧ್ಯಕ್ಷತೆ ಸ್ಥಾನವನ್ನು ಅಲಂಕರಿಸಿ ಮಾತನಾಡಿದ ಅವರು, ಮಕ್ಕಳು ಸತತ ಅಧ್ಯಯನ ಮಾಡುವ ಮೂಲಕ ಹೆಚ್ಚು ಅಂಕಗಳನ್ನು ಪಡೆದುಕೊಂಡು ಜ್ಞಾನವಂತರಾಗಿ ಪಾಲಕರಿಗೆ ಮತ್ತು ವಿದ್ಯಾಸಂಸ್ಥೆಗೆ ಕೀರ್ತಿಯನ್ನು ತರಬೇಕೆಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕ ಪಿ.ಡಿ. ಕುಲಕರ್ಣಿ, ಮುಖ್ಯಗುರುಮಾತೆ ಎಮ್.ಪಿ. ಬುಕ್ಕಾ, ವ್ಹಿ.ಕೆ.ಚವ್ಹಾಣ ಸತೀಶ ಕುಲಕರ್ಣಿ, ರಾಜೇಶ್ವರಿ ಪಕೀರಪುರ ಸೇರಿದಂತೆ ಸಂಸ್ಥೆಯ ಆಡಳಿತ ಮಂಡಳಿ, ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗು ವಿದ್ಯಾರ್ಥಿಗಳಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

