ಸಿಂದಗಿ: ಪಟ್ಟಣದ ಪದ್ಮರಾಜ ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಶಿಕ್ಷಕರ ಸಹ ಪಠ್ಯ ಚಟುವಟಿಕೆಯಲ್ಲಿ ಪಟ್ಟಣದ ವಿದ್ಯಾನಗರದ ಸರ್ಕಾರಿ ಪ್ರಾಥಮಿಕ ಪಾಠ ಶಾಲೆ ಆದರ್ಶ ಶಿಕ್ಷಕ ಹಾಗೂ ಸ್ಕೌಟ್ ಮತ್ತು ಗೈಡ್ಸ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜ ಸೋಮಾಪೂರ ಅವರು
ತಾಲೂಕು ಮಟ್ಟದ ಶಿಕ್ಷಕರ ಸಹ ಪಠ್ಯ ಚಟುವಟಿಕೆಯ ವಿಜ್ಞಾನ ರಸ ಪ್ರಶ್ನೆ ಕಾಯ೯ಕ್ರಮದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಬಂದು ಜಿಲ್ಲೆಗೆ ಆಯ್ಕೆಯಾಗಿರುತ್ತಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಲಯದ ಶಿಕ್ಷಣ ಸಂಯೋಜಕ ಆನಂದ ಮಾಡಗಿ, ಸುಧೀರ ಕಮತಗಿ ಸಾಹೇಬಗೌಡ ಬಿರಾದಾರ, ಹಾಗೂ ಎಸ್.ಎಂ.ಬಿರಾದಾರ ಅಭಿನಂದನ ಪತ್ರ ನೀಡಿ ಗೌರವಿಸಿದರು.
ಶಿಕ್ಷಕ ಬಸವರಾಜ ಸೋಮಪೂರ ಅವರಿಗೆ ಶಿಕ್ಷಕ ಸಾಹಿತಿ ಬಸವರಾಜ ಅಗಸರ ಅಭಿನಂದಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

