ವಿಜಯಪುರ: ‘ವಿಶ್ವ ಏಡ್ಸ್’ ದಿನದ ಅಂಗವಾಗಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತಿ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕ ಜಿಲ್ಲಾಸ್ಪತ್ರೆ , ಸ್ವಯಂ ಸೇವಾ ಸಂಘ ಸಂಸ್ಥೆಗಳು, ಎನ್‌ಎಸ್ ಎಸ್ ಘಟಕಗಳು, ರೆಡ್ ರಿಬ್ಬನ್ ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ ನ.೩೦ರಂದು ಜಾಥಾ, ಮಾನವ ಸರಪಳಿ ನಿರ್ಮಿಸಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಮುದಾಯಗಳು ಮುನ್ನಡೆಯಲಿ ಎಂಬ ಈ ವರ್ಷದ ಘೋಷ ವಾಕ್ಯದೊಂದಿಗೆ
ನ.೩೦ರಂದು ಸಂಜೆ ೬ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿ ವೃತ್ತದವರೆಗೆ ದೀಪ ನಡಿಗೆ (ಕ್ಯಾಂಡಲ್ ಮಾರ್ಚ್) ಜಾಥಾ ಹಾಗೂ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಜಾಗೃತಿ ಮೂಡಿಸಲಾಗುವುದು. ಡಿ.೧ರಂದು ಬೆಳಿಗ್ಗೆ ೮.೩೦ಕ್ಕೆ ಕೇಂದ್ರ ಬಸ್ ನಿಲ್ದಾಣದಿಂದ ಜೋಡ ಗುಮ್ಮಟ,ಮೀನಾಕ್ಷಿ ಚೌಕ,ಗಾಂಧಿ ವೃತ್ತ ಮಾರ್ಗವಾಗಿ ಸಂತ ಅನ್ನಮ್ಮಾ ದೇವಾಲಯ (ಚರ್ಚ್)ವರೆಗೆ ಜಾಥಾ ಹಮ್ಮಿಕೊಳ್ಳಲಾಗಿದೆ. ಸಂತ ಅನ್ನಮ್ಮಾ ದೇವಾಲಯ (ಚರ್ಚ್)ನಲ್ಲಿ ವೇದಿಕೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಈ ಜಾಥಾ ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
