ಮುದ್ದೇಬಿಹಾಳ: ಪಟ್ಟಣದ ಹಳೆಯ ಕಾಯಿಪಲ್ಲೆ ಮಾರುಕಟ್ಟೆಯಲ್ಲಿರುವ ಖಾಸ್ಗತೇಶ್ವರ ಮಠದಲ್ಲಿ ನ.೩೦ ರಂದು ಸಂಜೆ ೫ಕ್ಕೆ ಕಾರ್ತಿಕ ಕಿರಣ ಕಾರ್ಯಕ್ರಮದ ಮಂಗಲೋತ್ಸವ ಕಾರ್ಯಕ್ರಮ ಜರುಗಲಿದೆ.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಇಂಗಳೆಶ್ವರದ ಚನ್ನಬಸವ ಮಹಾಸ್ವಾಮಿಗಳು ವಹಿಸಲಿದ್ದು, ಇಟಗಿಯ ಭೂಕೈಲಾಸ ಮೇಲ್ಗದ್ದುಗೆಯ ಡಾ.ಗುರುಶಾಂತವೀರ ಶಿವಾಚಾರ್ಯರು, ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ದೇವರು, ಬಾಗೇವಾಡಿಯ ವಿರಕ್ತಮಠದ ಸಿದ್ಧಲಿಂಗ ಮಹಾಸ್ವಾಮಿಗಳು, ತಾಳಿಕೋಟೆ ಖಾಸ್ಗತೇಶ್ವರ ಮಠದ ಬಾಲ ಶಿವಯೋಗಿ ಸಿದ್ಧಲಿಂಗ ದೇವರು, ಮುದ್ದೇಬಿಹಾಳದ ಖಾಸ್ಗತೇಶ್ವರ ಮಠದ ಸಂಗಯ್ಯ ಸ್ವಾಮಿಗಳು ವಹಿಸಲಿದ್ದು, ಉದ್ಘಾಟಕರಾಗಿ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ, ಸಾಧನಾ ಮಹಿಳಾ ಒಕ್ಕೂಟದ ಅಧ್ಯಕ್ಷೆ ಗಿರಿಜಾ ಕಡಿ ಅಧ್ಯಕ್ಷತೆವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿ.ಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಯಶಸ್ವಿನಿ ಸಾಮಾಜಿಕ ಮಹಿಳಾ ಸೇವಾ ಸಂಘದ ಸಿದ್ದಮ್ಮ ಒಣರೊಟ್ಟಿ ಆಗಮಿಸಲಿದ್ದು, ಅಕ್ಕನ ಬಳಗದ ಗೌರಮ್ಮ ನಿಡಗುಂದಿಮಠ, ಸಾಧನಾ ಮಹಿಳಾ ಒಕ್ಕೂಟದ ಗೌರವಾಧ್ಯಕ್ಷೆ ಬೋರಮ್ಮ ರಾಂಪೂರ ಉಪಸ್ಥಿತರಿರಲಿದ್ದಾರೆ.
ಒಕ್ಕೂಟದ ಕಾರ್ಯದರ್ಶಿ ಶಶಿಕಲಾ ಕೆಂಧೂಳಿ ಪ್ರಸ್ತಾವಿಕವಾಗಿ ಮಾತನಾಡಲಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
