Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶರಣರ ತತ್ವ ಸಿದ್ದಾಂತಗಳು ಮೈಗೂಡಿಸಿಕೊಳ್ಳಿ :ಶಾಸಕ ಮನಗೂಳಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೂಲಿಕಾರರಿಗೆ ಕೆಲಸ ನೀಡಲು ವಿಫಲರಾದಲ್ಲಿ ಕಠಿಣ ಕ್ರಮ
(ರಾಜ್ಯ ) ಜಿಲ್ಲೆ

ಕೂಲಿಕಾರರಿಗೆ ಕೆಲಸ ನೀಡಲು ವಿಫಲರಾದಲ್ಲಿ ಕಠಿಣ ಕ್ರಮ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳಿಗೆ ಸಿಇಓ ರಾಹುಲ್ ಶಿಂಧೆ ಎಚ್ಚರಿಕೆ

ವಿಜಯಪುರ: ಜಿಲ್ಲೆಯಾದ್ಯಂತ ಬರ ಪರಿಸ್ಥಿತಿ ಇರುವುದರಿಂದ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು. ಕೆಲಸ ಬಯಸಿ ಬರುವ ಕೂಲಿಕಾರರಿಗೆ ಕೆಲಸ ನೀಡಬೇಕು. ಕೆಲಸ ನೀಡಲು ವಿಫಲರಾದಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ & ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಸೂಚನೆ ಮೇರೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿಷಯಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿದ ಅವರು,
ಬರ ಪರಿಸ್ಥಿತಿ ಇರುವುದರಿಂದ ಕೂಲಿ ಬಯಸಿ ಅರ್ಜಿ ಸಲ್ಲಿಸಿದ ೧೫ ದಿನಗಳೊಳಗಾಗಿ ಕೆಲಸ ನೀಡಬೇಕು. ಒಂದು ವೇಳೆ ಅರ್ಜಿ ಸಲ್ಲಿಸಿದ ೧೫ ದಿನಗಳೊಳಗಾಗಿ ಕೆಲಸ ನೀಡದಿದ್ದಲ್ಲಿ ಅಂತಹ ಫಲಾನುಭವಿಗಳಿಗೆ ಕಡ್ಡಾಯವಾಗಿ ನಿರುಧ್ಯೋಗ ಭತ್ಯೆ ನೀಡಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಸಚಿವರ ಸೂಚನೆಯಂತೆ ತಾಲೂಕು ಪಂಚಾಯತಿ ಹಂತದಲ್ಲಿ ಕಡ್ಡಾಯವಾಗಿ ನಿಗದಿಪಡಿಸಿದ ದಿನದಂದು ಸಭೆಯನ್ನು ಆಯೋಜನೆ ಮಾಡಿ, ಸಭೆಯ ನಡುವಳಿಗಳನ್ನು ಈ ಕಾರ್ಯಾಲಯಕ್ಕೆ ಸಲ್ಲಿಸಬೇಕೆಂದು ಎಲ್ಲ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಯಾವದೇ ಕಾರಣಕ್ಕೂ ಸಭೆ ರದ್ದುಗೊಳಿಸುವದನ್ನು, ಮುಂದೊಡುವದನ್ನು ಮಾಡದಂತೆ ಅವರು ಸೂಚಿಸಿದರು.
ಮಹಾತ್ಮ ಗಾಂಧಿ ನರೇಗಾ ಯೋಜನೆಯ ಅನುಷ್ಟಾನ ಇಲಾಖೆಗಳು ಸಹ ನಮ್ಮ ಆರ್.ಡಿ.ಪಿ.ಆರ್ ಇಲಾಖೆಯ ಭಾಗವಾಗಿದ್ದು, ಎಲ್ಲ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಅತ್ಯಂತ ಸಮನ್ವಯತೆಯಿಂದ ಕಾರ್ಯನಿರ್ವಹಿಸುವ ಮೂಲಕ ಬರ ನಿರ್ವಹಣೆಗೆ ಸನ್ನದ್ಧರಾಗುವಂತೆ ಅವರು ತಿಳಿಸಿದರು.
ಪ್ರಗತಿ ಕುಂಠಿತ ಇರುವ ಗ್ರಾಮ ಪಂಚಾಯತಿಗಳಿಗೆ ಖುದ್ದಾಗಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಸಹಾಯಕ ನಿರ್ದೇಶಕರುಗಳು ಭೇಟಿ ನೀಡಿ ಗ್ರಾಮ ಪಂಚಾಯತಿ ಚುನಾಯಿತ ಸದಸ್ಯರ, ಅಧಿಕಾರಿಗಳ ಸಭೆ, ಗ್ರಾಮದಲ್ಲಿ ಸ್ವ-ಸಹಾಯ ಸಂಘದ ಸಭೆ, ಕಾಯಕ ಬಂಧುಗಳ ಸಭೆ ಆಯೋಜನೆ ಮಾಡುವ ಮೂಲಕ ಮಹಿಳೇಯರು ಹೆಚ್ಚಾಗಿ ಯೋಜನೆಯಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು. ನರೇಗಾ ಯೋಜನೆಯಡಿ ಎಲ್ಲ ಕೂಸಿನ ಮನೆಗಳು ಕಡ್ಡಾಯವಾಗಿ ಪ್ರಾರಂಭ ಮಾಡುವ ಮೂಲಕ ಮಹಿಳೆಯರು ಮತ್ತು ವಿಕಲಚೇತನರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು ಎಂದು ಅವರು ಸೂಚಿಸಿದರು.
ಜಲ ಜೀವನ್ ಮಿಷನ್ ಯೋಜನೆಯ ಕುರಿತು ಗುಣಮಟ್ಟ ಮತ್ತು ಇತರೆ ವಿಷಯಗಳ ಪ್ರಗತಿ ಪರಿಶೀಲನೆಯನ್ನು ತಾಲೂಕು ಹಂತದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಜಂಟಿಯಾಗಿ ನಡೆಸಬೇಕು. ಗ್ರಾಮ ಪಂಚಾಯತಿಯಲ್ಲಿ ತೆರಿಗೆ ವಸೂಲಾತಿಯನ್ನು ಕಡ್ಡಾಯವಾಗಿ ಪಿ.ಓ.ಎಸ್ ಮಷೀನ ಮೂಲಕ ಮಾಡಬೇಕು ಮತ್ತು ಪಿ.ಓ.ಎಸ್ ಮಷಿನ ಮೂಲಕವೇ ಸಾರ್ವಜನಿಕರಿಗೆ ರಶೀದಿ ನೀಡಬೇಕು.. ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಹಾಜರಾತಿಯನ್ನು ಕಡ್ಡಾಯವಾಗಿ ಇ-ಹಾಜರಾತಿಯಲ್ಲಿ ನಮೂದಿಸಬೇಕು. ಸಕಾಲ ಸೇರಿದಂತೆ ವಿವಿಧ ಮಾರ್ಗಗಳ ಮೂಲಕ ಸ್ವೀಕೃತ್ತವಾಗುವ ದೂರುಗಳನ್ನು ಕಾಲಮಿತಿಯೊಳಗೆ ಕಡ್ಡಾಯವಾಗಿ ಪರಿಹರಿಸಬೇಕು ಎಂದು ಅವರು ಸೂಚನೆ ನೀಡಿದರು.
ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆಯಾದ್ದಲ್ಲಿ ತುರ್ತಾಗಿ ಪರಿಹಾರ ಒದಗಿಸಲು ಎಲ್ಲ ಸಿದ್ಧತಾ ಕ್ರಮಗಳನ್ನು ಮುಂಚಿತವಾಗಿ ಸಿದ್ಧತೆ ಮಾಡಿಟ್ಟುಕೊಳ್ಳುವಂತೆ ಎಲ್ಲ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ಡಾ. ವಿಜಯಕುಮಾರ ಆಜೂರ, ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ, ಯೋಜನಾ ನಿರ್ದೇಶಕರಾದ ಸಿ.ಬಿ.ದೇವರಮನಿ, ಅನುಷ್ಠಾನ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶರಣರ ತತ್ವ ಸಿದ್ದಾಂತಗಳು ಮೈಗೂಡಿಸಿಕೊಳ್ಳಿ :ಶಾಸಕ ಮನಗೂಳಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶರಣರ ತತ್ವ ಸಿದ್ದಾಂತಗಳು ಮೈಗೂಡಿಸಿಕೊಳ್ಳಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026
    In ದಿನಪತ್ರಿಕೆ
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.