Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪತ್ರಕರ್ತರು ವೃತ್ತಿಬದ್ದತೆ ಕಾಪಾಡಬೇಕು :ಹೊರಟ್ಟಿ
(ರಾಜ್ಯ ) ಜಿಲ್ಲೆ

ಪತ್ರಕರ್ತರು ವೃತ್ತಿಬದ್ದತೆ ಕಾಪಾಡಬೇಕು :ಹೊರಟ್ಟಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ ಕೆಯುಡಬ್ಲ್ಯೂಜೆ ಅಭಿನಂದನೆ

ಬೆಂಗಳೂರು: ಪತ್ರಕರ್ತರು ಸಮಾಜದ ಮತ್ತು ಸರ್ಕಾರದ ಅಂಕು-ಡೊಂಕುಗಳನ್ನು ತಿದ್ದುವವರಾಗಿದ್ದು, ವೃತ್ತಿ ಬದ್ದತೆ ಕಾಪಾಡಿಕೊಳ್ಳುವಂತೆ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಕರೆ ನೀಡಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ವತಿಯಿಂದ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಅವರು ಮಾತನಾಡಿದರು.
ಈ ಬಾರಿ ಸಮರ್ಥ ಪತ್ರಕರ್ತರಿಗೆ ಪ್ರಶಸ್ತಿಗಳು ಅರಸಿ ಬಂದಿರುವುದು ನಿಜಕ್ಕೂ ಶ್ಲಾಘನೀಯ. ಪತ್ರಕರ್ತರು ದಿಟ್ಟತನದಿಂದ ಕಾರ್ಯ ನಿರ್ವಹಿಸಬೇಕಾದುದು ಅತ್ಯಗತ್ಯ. ಹಾಗಾಗಿ ಸಮರ್ಥರಿಗೆ ಮನ್ನಣೆ ನೀಡಬೇಕಾದುದು ಎಲ್ಲರ ಕರ್ತವ್ಯ ಎಂದರು.
ನಾನು ಸದನಕ್ಕೆ ಬಂದ ಹೊಸದರಲ್ಲಿ ಏನೇನು ತಪ್ಪು ಮಾಡಿದೆ ಎನ್ನುವುದನ್ನು ಹಿರಿಯ ಪತ್ರಕರ್ತರೇ ತಿದ್ದಿ ಹೇಳುತ್ತಿದ್ದರು. ಹಾಗಾಗಿ ಬಹಳ ಕಲಿಯಲು ಸಾಧ್ಯವಾಯಿತು. ವೃತ್ತಿಪರವಾಗಿ ಅಷ್ಟು ಪ್ರಭುದ್ಧತೆ ಪತ್ರಕರ್ತರಿಗೆ ಇರಬೇಕು ಎಂದರು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಮಾತನಾಡಿ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘವು ವೃತ್ತಿ ಭಾಂದವರ ಬಗ್ಗೆ ತೋರುತ್ತಿರುವ ಕಾಳಜಿಯು ನಿಜಕ್ಕೂ ಸ್ತುತ್ಯಾರ್ಹ. ಪತ್ರಿಕಾ ವಿತರಕರನ್ನೂ ಸರ್ಕಾರ ಈ ಬಾರಿ ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಿದೆ. ಅಪಘಾತದಲ್ಲಿ ಮೃತಪಟ್ಟವರಿಗೆ ಮತ್ತು ಆಸ್ಪತ್ರೆಗೆ ಸೇರಿದವರಿಗೆ ನೆರವು ನೀಡುವ ಯೋಜನೆ ಜಾರಿಗೆ ತರಲಾಗಿದೆ ಎಂದರು.
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪತ್ರಕರ್ತರಾದ ಮಾಯಾ ಶರ್ಮಾ, ಸುದ್ದಿಮನೆಯ ಹಿರಿಯ ಸುಬ್ಬು ಹೊಲೆಯಾರ್ ಮಾತನಾಡಿ, ವೃತ್ತಿಪರವಾದ ಕೆಯುಡಬ್ಲ್ಯೂಜೆ ಸಂಸ್ಥೆಯಲ್ಲಿ ನಮಗೆ ಗೌರವಿಸುತ್ತಿರುವುದು ಸಂತೋಷದ ಸಂಗತಿ ಎಂದರು.
ಪತ್ರಕರ್ತ ರಫೀಕ್ ಭಂಡಾರಿ, ಪತ್ರಿಕಾ ವಿತರಕರಾದ ಜವರಪ್ಪ ಅವರನ್ನು ಗೌರವಿಸಲಾಯಿತು.
ವಿಧಾನ ಪರಿಷತ್ ಸಭಾಪತಿಗಳ ವಿಶೇಷಾಧಿಕಾರಿ ಡಾ. ಮಹೇಶ್ ವಾಳ್ವೇಕರ್, ಸ್ಪೀಕರ್ ಕಚೇರಿಯ ಸಂಯೋಜಕರಾದ ಜ್ಞಾನಶೇಖರ್ ಅವರನ್ನೂ ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.
ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯನಿರತ ಪತ್ರಕರ್ತರ ಸಂಘವು ಪತ್ರಕರ್ತರ ಕ್ಷೇಮಾಭಿವೃದ್ಧಿಗೆ ಬದ್ಧವಾಗಿ ಕೆಲಸ ಮಾಡುತ್ತದೆ. ವೃತ್ತಿ ನಿರತರನ್ನು ಕೆಯುಡಬ್ಲ್ಯೂಜೆ ಅಂಗಳದಲ್ಲಿ ಸನ್ಮಾನಿಸುತ್ತಿರುವುದು ಅಭಿಮಾನದ ಸಂಗತಿ ಎಂದರು.
ಸಮಾರಂಭದಲ್ಲಿ ರಾಜ್ಯ ಸಂಘದ ಕಾರ್ಯದರ್ಶಿ ನಿಂಗಪ್ಪ ಚಾವಡಿ, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಖಜಾಂಚಿ ವಾಸುದೇವ ಹೊಳ್ಳ ಮತ್ತಿತರರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 22, 2026
    In ದಿನಪತ್ರಿಕೆ
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.