ಮುದ್ದೇಬಿಹಾಳ: ಇಲ್ಲಿನ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮುದ್ದೇಬಿಹಾಳ ಕ್ರಿಕೇಟ್ ಪ್ರೀಮಿಯರ್ ಲೀಗ್ ಸೀಜನ್ ೬ ನ ಮುಕ್ತಾಯ ಸಮಾರಂಭವನ್ನು ಡಿ.೩ ರಂದು ಸಂಜೆ ೫:೩೦ಕ್ಕೆ ಹಮ್ಮಿಕೊಳ್ಳಲಾಗಿದೆ.
ಸಮಾರಂಭದ ದಿವ್ಯ ಸಾನಿಧ್ಯವನ್ನು ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ದೇವರು ಮತ್ತು ಮೌಲಾನಾ ಅಲ್ಲಾಭಕ್ಷ ಖಾಜಿ ವಹಿಸಲಿದ್ದಾರೆ. ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅಧ್ಯಕ್ಷತೆ, ಸಮಾಜ ಸೇವಕ, ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ, ಯಾಸೀನ್ ಸೋಠೆ ಮುಖ್ಯ ಅತಿಥಿಗಳಾಗಿ ಸಮಾಜ ಸೇವಕ ಮಲ್ಲಿಕಾರ್ಜುನ ಮದರಿ, ಶಾಂತಗೌಡ ಪಾಟೀಲ ನಡಹಳ್ಳಿ, ಮಾಜಿ ಪುರಸಭೆ ಅಧ್ಯಕ್ಷೆ ಪ್ರತಿಭಾ ಅಂಗಡಗೇರಿ, ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ವಿ.ಎಂ.ನಾಗಠಾಣ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಗುರು ತಾರನಾಳ, ದಿ ಕರ್ನಾಟಕ ಕೋ ಅಪ್ ಬ್ಯಾಂಕ್ ಅಧ್ಯಕ್ಷ ಸತೀಶ ಓಸ್ವಾಲ, ಪು.ಸ ಮಹೆಬೂಬ ಗೊಳಸಂಗಿ ಸೇರಿದಂತೆ ಮತ್ತೀತರರು ಅತಿಥಿಗಳಾಗಿ ಆಗಮಿಸಲಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
