ವಿಜಯಪುರ: ಪಂಚರಾಜ್ಯ ಚುನಾವಣೆಗಳಲ್ಲಿ ಬಿಜೆಪಿ ಪಕ್ಷ ಮೂರು ರಾಜ್ಯಗಳಲ್ಲಿ ಅಭೂತಪೂರ್ವ ಜಯ ಸಾಧಿಸಿದ್ದು ಈ ಫಲಿತಾಂಶ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ಬಿಜೆಪಿ ಮುಖಂಡ ಹಾಗೂ ಮೀನುಗಾರರ ಸಂಘದ ರಾಷ್ಟ್ರೀಯ ಉಪಾಧ್ಯಕ್ಷ ಡಾ.ಗೌತಮ್ ಚೌಧರಿ ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಕುರಿತು ಸೋಮವಾರ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸಗಢ ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯ ದಾಖಲಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಆಡಳಿತವನ್ನು ಇಡೀ ದೇಶವೇ ಮೆಚ್ಚಿದೆ ಎನ್ನುವುದಕ್ಕೆ ಈ ಫಲಿತಾಂಶವೇ ಸಾಕ್ಷಿ. ಪ್ರತಿಪಕ್ಷಗಳು ಬಿಜೆಪಿ ಹಾಗೂ ಪ್ರದಾನಿ ಮೋದಿ ಕುರಿತು ಎಷ್ಟೇ ಅವಹೇಳನಕಾರಿಯಾಗಿ ಮಾತನಾಡಿದರೂ ಜನತೆ ಅದನ್ನು ಗಣನೆಗೆ ತೆಗೆದುಕೊಳ್ಳದೇ ಮೋದಿ ಅವರ ನಾಯಕತ್ವವನ್ನು ಮೆಚ್ಚಿ ಬಿಜೆಪಿಗೆ ಆಶೀರ್ವದಿಸಿದ್ದಾರೆ ಎಂದು ಹೇಳಿದರು.
ಈ ಫಲಿತಾಂಶದಿಂದ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಸಹ ದೇಶದಲ್ಲಿ ಮತ್ತೆ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವನ್ನು ಡಾ.ಗೌತಮ್ ಚೌಧರಿ ವ್ಯಕ್ತಪಡಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

