ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ಸಂಭ್ರಮ-೫೦ರ ಅಂಗವಾಗಿ ನಗರದ ವಿವೇಕನಗರದಲ್ಲಿರುವ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಡಿ.೬ ರಂದು ಚಿಗುರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಚಿಗುರು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕು.ಸುಮಯ್ಯಾ ಶೇಖ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ನಾಟ್ಯ ಕಲಾ ಅಕಾಡೆಮಿ ವತಿಯಿಂದ ಸಮೂಹ ನೃತ್ಯ, ಕು.ನಿಜಬಾಯಿ ಹೋಸಾಳಿ ಏಕತಾಪ್ರಾಭಿನಯ, ಕು.ಲಕ್ಷ್ಮೀ ಮುರನಕೇರಿ ಅವರಿಂದ ಜಾನಪದ ಗೀತೆಗಳು ಹಾಗೂ ಕು.ಸಮರ್ಥ ಸಂಕೊಂಡ ಮತ್ತು ಸಂಗಡಿಗರಿಂದ ನಲಿ-ಕಲಿ ನಾಟಕ ಪ್ರದರ್ಶನ ಜರುಗಲಿವೆ.
ಅಂದು ಬೆಳಿಗ್ಗೆ ೧೦ ಗಂಟೆಗೆ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ. ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ(ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಬಿ.ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ ಸಿ.ಎಸ್.ನಾಡಗೌಡ, ವಿಠ್ಠಲ ಕಟಕದೊಂಡ, ಭೀಮನಗೌಡ (ರಾಜುಗೌಡ) ಬಸನಗೌಡ ಪಾಟೀಲ, ಅಶೋಕ ಮಲ್ಲಪ್ಪ ಮನಗೂಳಿ ಹಾಗೂ ವಿಶೇಷ ಆಹ್ವಾನಿತರಾಗಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಪ್ರೌಢಶಾಲೆಯ ಅಧ್ಯಕ್ಷರಾದ ಸುರೇಶ ದೇಸಾಯಿ ಹಾಗೂ ಮುಖ್ಯೋಪಾಧ್ಯಾಯ ಜಿ.ಎಂ.ಬಿರಾದಾರ ಅವರು ಭಾಗವಹಿಸಲಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
