ವಿಜಯಪುರ: ಮಕ್ಕಳಿಗೆ ಪರಿಣಾಮಕಾರಿಯಾಗಿ ಬೋಧನೆ ಮಾಡಲು ಪಠ್ಯದ ಜೊತೆಗೆ ಸಹಪಠ್ಯ ಚಟುವಟಿಕೆ ಅಗತ್ಯವಾಗಿವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಎನ್.ಎಚ್.ನಾಗೂರ ಹೇಳಿದರು.
ನಗರದ ಮರಾಠಾ ವಿಧ್ಯಾಲಯದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ, ಕರ್ನಾಟಕ ರಾಜ್ಯ ವಿಧ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರ, ಜಿಲ್ಲಾ ಪಂಚಾಯತಿ ವಿಜಯಪುರ, ಉಪನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಕರಿಗಾಗಿ ನಡೆದ ಜಿಲ್ಲಾ ಮಟ್ಟದ 2023-24ನೇ ಸಾಲಿನ ಸಹಪಠ್ಯ ಚಟುವಟಿಕೆ ಸ್ಪರ್ಧೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಕರು ಪಠ್ಯ ಬೋಧನೆ ಜೊತೆಗೆ ಮಕ್ಕಳಿಗೆ ಪಠ್ಯೇತರ ಚಟುವಟಿಕೆ ಮೂಲಕ ಕಲಿಸುವದರಿಂದ ಪರಿಣಾಮಕಾರಿ ಕಲಿಕೆಯಾಗುವದು. ಶಿಕ್ಷಕರ ವಿಶೇಷ ಪ್ರತಿಭೆ ಹಾಗೂ ಕೌಶಲ್ಯ ಹೊರಹಾಕಲು ಈ ಸಹಪಠ್ಯ ಚಟುವಟಿಕೆ ಸ್ಪರ್ಧೆ ಏರ್ಪಡಿಸಲಾಗಿದೆ. ಸ್ಪರ್ಧಾತ್ಮಕ ಯುಗದಲ್ಲಿ ಇಂತಹ ಪಠ್ಯೇತರ ಚಟುವಟಿಕೆ ಏರ್ಪಡಿಸುವದರಿಂದ ಶಿಕ್ಷಕರಿಗೆ ಅನೂಕೂಲ ಎಂದರು.
ಕರ್ನಾಟಕ ರಾಜ್ಯ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾದ್ಯಕ್ಷ ಸುರೇಶ ಶಡಶ್ಯಾಳ ಮಾತನಾಡಿ ಪರಿಣಾಮಕಾರಿ ಬೋಧನೆ ಮಾಡಲು ಶಿಕ್ಷಕರಿಗೆ ಉತ್ತೇಜನ ನೀಡಲು ಈ ಸಹಪಠ್ಯ ಚಟುವಟಿಕೆ ಸಹಕಾರಿಯಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ನೌಕರರ ಸಂಘದ ಜಿಲ್ಲಾ ಖಜಾಂಚಿ ಜುಬೇರ ಕೆರೂರ, ಕನ್ನಡ ವಿಷಯ ಪರಿವೀಕ್ಷಕಿ ಎಸ್. ಎ.ಅಳ್ಳಗಿ, ವಿ.ಆರ್. ಹಿರೇಮಠ, ಡಿವೈಪಿಸಿ ಟಿ.ಎಸ್. ಕೋಲಾರ, ಪ್ರೌಢ ಶಾಲಾ ಸಹಶಿಕ್ಷಕ ಸಂಘದ ಜಿಲ್ಲಾಧ್ಯಕ್ಷ ಶಿವರಾಜ್ ಬಿರಾದಾರ, ಎನ್ಪಿಎಸ್ ನೌಕರ ಸಂಘದ ಜಿಲಾಧ್ಯಕ್ಷ ಮಲ್ಲನಗೌಡ ಹಡಲಗೇರಿ, ಮಹಾಂತೇಶ ಅಂಗಡಿ, ಶ್ರೀರಾಮ ಭಟ್ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

