ವಿಜಯಪುರ: ಅಂತರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ೨೦೨೪ರ ಅಂಗವಾಗಿ ವಿಜಯಪುರ ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆಯನ್ನು ವಿಜಯಪುರದ ಜಿಲ್ಲಾ ಕೃಷಿ ತರಬೇತಿ ಕೇಂದ್ರ,ಹಿಟ್ನಳ್ಳಿ ಫಾರ್ಮದಲ್ಲಿ ಡಿಸೆಂಬರ್ ೧೪ ರಂದು ಏರ್ಪಡಿಸಲಾಗಿದೆ.
ರಾಜ್ಯ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆಯಲ್ಲಿ ಭಾಗವಹಿಸುವುದಕ್ಕಾಗಿ ಜಿಲ್ಲೆಯಿಂದ ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ. ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಜಿಲ್ಲೆಯ ಎಲ್ಲ ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶವಿರುತ್ತದೆ. ಸಿರಿ ಧಾನ್ಯ ಪಾಕ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವವರು ತಮ್ಮ ಹೆಸರನ್ನು ಡಿಸೆಂಬರ್ ೧೩ರೊಳಗಾಗಿ ವಿಜಯಪುರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ದೂರವಾಣಿ ೯೧೦೮೧೫೧೭೮೬ ಸಂಖ್ಯೆಗೆ ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
