ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಪರಿ ನಿರ್ವಾಣ ದಿನದ ಪ್ರಯುಕ್ತ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಹಾಗೂ ಜಿಪಂ ಸಿಇಒ ರಾಹುಲ್ ಶಿಂಧೆ ಅವರು ನಗರದ ಅಂಬೇಡ್ಕರ್ ವೃತ್ತದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ ಮಾಡಿ, ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ವಿಜಯಪುರ ಉಪ ವಿಭಾಗಾಧಿಕಾರಿ ಬಸಣೆಪ್ಪ ಕಲಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಪುಂಡಲಿಕ ಮಾನವರ ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಮುಖಂಡರು ಭಾಗವಹಿಸಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

