ವಿಜಯಪುರ: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಡಿ.೮ ರಿಂದ ೧೪ರವರೆಗೆ ಜರುಗುವ ಅರಕೇರಿಯ ಶ್ರೀ ಅಮೋಘಸಿದ್ದ ದೇವರ ಜಾತ್ರೆ ಹಾಗೂ ಗುಡ್ಡಾಪುರದ ಶ್ರೀ ದಾನಮ್ಮದೇವಿ ಜಾತ್ರೆಗೆ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದಿಂದ ವಿಶೇಷ ಬಸ್‌ಗಳ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ವಿಜಯಪುರ ವಿಭಾಗದ ವಿಜಯಪುರ, ಇಂಡಿ, ಸಿಂದಗಿ ಮುದ್ದೇಬಿಹಾಳ, ತಾಳಿಕೋಟ ಹಾಗೂ ಬಸವನಬಾಗೇವಾಡಿ ಘಟಕದ ಕೇಂದ್ರ ಬಸ್ ನಿಲ್ದಾಣಗಳಿಂದ ಅರಕೇರಿ ಹಾಗೂ ಗುಡ್ಡಾಪುರಕ್ಕೆ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು. ಪ್ರಯಾಣಿಕರು ಸಾರಿಗೆ ಸೌಲಭ್ಯಕ್ಕಾಗಿ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವಿಜಯಪುರ-೧ ಮೊ: ೭೭೬೦೯೯೨೨೬೩, ವಿಜಯಪುರ-೨ ಮೊ: ೭೭೬೦೯೯೨೨೬೪, ವಿಜಯಪುರ-೩ ಮೊ: ೭೭೬೦೯೧೪೦೦೮, ಇಂಡಿ ಮೊ: ೭೭೬೦೯೯೨೨೬೫, ಸಿಂದಗಿ ಮೊ: ೭೭೬೦೯೯೨೨೬೬, ಮುದ್ದೇಬಿಹಾಳ ಮೊ: ೭೭೬೦೯೯೨೨೬೭, ತಾಳಿಕೋಟ ಮೊ: ೭೭೬೦೯೯೨೨೬೮, ಬಸವನಬಾಗೇವಾಡಿ ಮೊ: ೭೭೬೦೯೯೨೨೬೯, ಕೇಂದ್ರ ಬಸ್ ನಿಲ್ದಾಣ ದೂ:೦೮೩೫೨-೨೫೧೩೪೪ ಹಾಗೂ ವಿಜಯಪುರ ಕೇಂದ್ರ ಬಸ್ ನಿಲ್ದಾಣ ಸಹಾಯಕ ಸಂಚಾರ ವ್ಯವಸ್ಥಾಪಕರ ಮೊ: ೭೭೬೦೯೯೨೨೫೮ ಸಂಖ್ಯೆಗೆ ಸಂಪರ್ಕಿಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಥಳೀಯ ಸಾರಿಗೆಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದಿಂದ ಡಿ.೮ ರಿಂದ ೧೪ರವರೆಗೆ ಅರಕೇರಿಯ ಶ್ರೀ ಅಮೋಘಸಿದ್ದ ದೇವರ ಜಾತ್ರೆ ಹಾಗೂ ಗುಡ್ಡಾಪುರದ ಶ್ರೀ ದಾನಮ್ಮದೇವಿ ಜಾತ್ರೆಗೆ ಹೆಚ್ಚುವರಿ ಸಾರಿಗೆಗಳ ಕಾರ್ಯಾಚರಣೆ ಮಾಡುವುದರಿಮದ ಸ್ಥಳೀಯ ಸಾರಿಗೆಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಲಿದ್ದು, ಪ್ರಯಾಣಿಕರು ನಿಗಮದೊಂದಿಗೆ ಸಹಕರಿಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
