Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಎಂ ಹೇಳಿಕೆಗೆ ಬಿಜೆಪಿ ಆಕ್ಷೇಪ, ಸದನದಲ್ಲಿ ಕೋಲಾಹಲ
(ರಾಜ್ಯ ) ಜಿಲ್ಲೆ

ಸಿಎಂ ಹೇಳಿಕೆಗೆ ಬಿಜೆಪಿ ಆಕ್ಷೇಪ, ಸದನದಲ್ಲಿ ಕೋಲಾಹಲ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುಸ್ಲಿಮರ ಕಲ್ಯಾಣಕ್ಕೆ ರೂ.10,000 ಕೋಟಿ ಘೋಷಣೆ | ಆಡಳಿತ-ವಿರೋಧ ಪಕ್ಷದ ಸದಸ್ಯರ ತೀವ್ರ ವಾಕ್ಸಮರ | ಬಿಜೆಪಿ ಸದಸ್ಯರಿಂದ ಸಭಾತ್ಯಾಗ |

ಬೆಳಗಾವಿ: ರಾಜ್ಯ ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯದ ಕಲ್ಯಾಣಕ್ಕಾಗಿ ರೂ.10 ಸಾವಿರ ಕೋಟಿ ಮೀಸಲಿಡುವುದಾಗಿ ಘೋಷಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಬುಧವಾರ ವಿಧಾನಸಭೆಯಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿತು.
ವಿಧಾನಸಭೆಯಲ್ಲಿ ಈ ವಿಚಾರ ಪ್ರಸ್ತಾಪ ಮಾಡಿದ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು, ಅಧಿವೇಶನ ನಡೆಯುವಾಗ ಸಿಎಂ ಈ ರೀತಿ ಅನುದಾನ ಘೋಷಣೆ ಮಾಡುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೆ ಮುಖ್ಯಮಂತ್ರಿಗಳು ವಿವರಣೆ ನೀಡಬೇಕು ಎಂದು ಆಗ್ರಹಿಸಿದರು.
ಇದಕ್ಕೆ ಧ್ವನಿಗೂಡಿಸಿದ ಬಿಜೆಪಿ ಸದಸ್ಯರು, ಮುಸ್ಲಿಂ ಸಮಾವೇಶದಲ್ಲಿ ಅಲ್ಪಸಂಖ್ಯಾತರಿಗೆ 10,000 ಕೋಟಿ ರೂ. ಘೋಷಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದ ಪಾವಿತ್ರ್ಯತೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದರು.
ಇದಕ್ಕೆ ಆಡಳಿತ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಆಡಳಿತ ಹಾಗೂ ವಿರೋಧ ಪಕ್ಷದ ಸದಸ್ಯರ ನಡುವೆ ತೀವ್ರ ವಾಕ್ಸಮರ ನಡೆಯಿತು.
ರೈತರಿಗೆ ಬರ ಪರಿಹಾರ ರೂ.2 ಸಾವಿರ ಕೋಟಿ ಪರಿಹಾರ ನೀಡಲು ಸಾಧ್ಯವಾಗದ ಸರ್ಕಾರ, ವಿಧಾನಸಭೆಯ ಗಮನಕ್ಕೆ ತಾರದೆ ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ರೂ. ಘೋಷಣೆ ಮಾಡುತ್ತಿದೆ ಎಂದ ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು, ಮುಖ್ಯಮಂತ್ರಿಗಳು ತಮ್ಮ ಹೇಳಿಕೆಯನ್ನು ಹಿಂಪಡೆದು ಸದನದ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
ನಾವು ಅಧಿಕಾರದಲ್ಲಿದ್ದಾಗ ಸದನ ನಡೆಯುವಾಗ ಎಲ್ಲೂ ಈ ರೀತಿಯ ಘೋಷಣೆ ಮಾಡಿಲ್ಲ. ಹತ್ತು ಸಾವಿರ ಕೋಟಿ ಬಜೆಟ್ ನಲ್ಲಿ ಅನುದಾನ ಕೊಡುತ್ತೇನೆ ಎಂದು ಸಿಎಂ ಘೋಷಣೆ ಮಾಡಿದ್ದಾರೆ. ಅಧಿವೇಶನ ನಡೆಯುವಾಗ ಈ ರೀತಿ ಮಾತನಾಡುವುದು ಸರಿಯಲ್ಲ ಎಂದರು.
ಸಿಎಂ ಪರವಾಗಿ ಮಾತನಾಡಿದ ಆಡಳಿತ ಪಕ್ಷದ ಸದಸ್ಯರು, ಸಿದ್ದರಾಮಯ್ಯನವರು ಅಲ್ಪಸಂಖ್ಯಾತರ ಇಲಾಖೆಗೆ ಪ್ರತಿ ವರ್ಷ ಬಜೆಟ್ ಹೆಚ್ಚಿಸುವ ಉದ್ದೇಶವಿದ್ದು, ಅಂತಿಮವಾಗಿ ಇಲಾಖೆ ಮೂಲಕ 10 ಸಾವಿರ ಕೋಟಿ ಖರ್ಚು ಮಾಡುವ ಉದ್ದೇಶವಿದೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಅಲ್ಪಸಂಖ್ಯಾತರಿಗೆ ಹಣ ನೀಡುವುದನ್ನು ಬಿಜೆಪಿ ವಿರೋಧಿಸುತ್ತಿದೆ ಎಂದರು.
ಇನ್ನು ಸಿಎಂ ಹೇಳಿದ್ದರಲ್ಲಿ ಏನು ತಪ್ಪಿದೆ? ಹಣಕಾಸಿನ ಯಾವುದೇ ನಿರ್ಧಾರವು ಹೇಗಿದ್ದರೂ ಅನುಮೋದನೆಗಾಗಿ ಈ ಸದನಕ್ಕೆ ಬರಲಿದೆ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ಮಾತನಾಡಿ, ಬಜೆಟ್ ಅನ್ನು 10,000 ಕೋಟಿ ರೂ.ಗೆ ಹೆಚ್ಚಿಸಲು ಪ್ರಯತ್ನಿಸುವುದಾಗಿ ಸಿಎಂ ಹೇಳಿದ್ದಾರೆ. ಇಲ್ಲಿ ನಿಯಮಗಳ ಉಲ್ಲಂಘನೆ ಏನಾಗಿದೆ? ಅವರು ಹಣ ಮಂಜೂರು ಮಾಡಿದ್ದರೆ ನೀವು ಆಕ್ಷೇಪಿಸಬಹುದು ಎಂದರು.
ಆದರೆ ಆಡಳಿತ ಪಕ್ಷದ ಉತ್ತರಕ್ಕೆ ತೃಪ್ತಿಯಾಗದ ವಿರೋಧ ಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ
    In (ರಾಜ್ಯ ) ಜಿಲ್ಲೆ
  • ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು
    In ವಿಶೇಷ ಲೇಖನ
  • ಮಣ್ಣಿನ ಆರೋಗ್ಯ ಕಾಪಾಡಲು ಸಾವಯವ ಕೃಷಿ ಅಗತ್ಯ :ಕನ್ನೇರಿ ಶ್ರೀ
    In (ರಾಜ್ಯ ) ಜಿಲ್ಲೆ
  • ಸಿದ್ದಾಪುರ ಪಿಕೆಪಿಎಸ್ ಚುನಾವಣೆಯಲ್ಲಿ ಸವದಿ ಗೆಲುವು
    In (ರಾಜ್ಯ ) ಜಿಲ್ಲೆ
  • ಹೊರ್ತಿ ರೇವಣಸಿದ್ದೇಶ್ವರ ದೇಗುಲಕ್ಕೆ ರಾಜ್ಯಪಾಲರ ಭೇಟಿ
    In (ರಾಜ್ಯ ) ಜಿಲ್ಲೆ
  • ಆದಿ ಶಂಕರಾಚಾರ್ಯರ ಜಯಂತಿ ಭಕ್ತಿಭಾವದಿಂದ ಆಚರಣೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರು, ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಏ.೨೪ರಂದು ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಹಾಗೂ ಗೀತ ಗಾಯನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.