ಮುದ್ದೇಬಿಹಾಳ: ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ, ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಶಿರಸಿ ಮತ್ತು ಜ್ಞಾನ ಭಾರತಿ ವಿದ್ಯಾ ಮಂದಿರ ಸಮೂಹ ಶಿಕ್ಷಣ ಸಂಸ್ಥೆ ಇವರ ಸಹಯೋಗದಲ್ಲಿ ನಡೆಯುತ್ತಿರುವ ತಾಲೂಕು ಮಟ್ಟದ ಭಗವದ್ಗೀತಾ ಅಭಿಯಾನ-ಕರ್ನಾಟಕ-೨೦೨೩ ಸಪ್ತಾಹದ ೨ನೇ ದಿನದ ಪಠಣ ಮತ್ತು ಉಪನ್ಯಾಸ ಕಾರ್ಯಕ್ರಮವನ್ನು ಡಿ.೮ ಶುಕ್ರವಾರ ಸಂಜೆ ೫.೩೦ ಗಂಟೆಗೆ ಪಟ್ಟಣದ ಪಿ.ಕೆ.ನಗರದ ಜ್ಞಾನ ಭಾರತಿ ವಿದ್ಯಾ ಮಂದಿರದಲ್ಲಿ ನಡೆಯಲಿದೆ. ಸಾರ್ಥಕ ಜೀವನಕ್ಕೆ ಭಗವದ್ಗೀತೆ ಎನ್ನುವ ವಿಷಯದ ಮೇಲೆ ಶಿಕ್ಷಣ ಸಂಯೋಜಕಿ ವಿಜಯಲಕ್ಷ್ಮೀ ಚಿಲ್ಲಾಳಶೆಟ್ಟಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಶಾಲಾ ಮಾತೆಯವರು ಸೇರಿ ಕಾರ್ತಿಕ ದೀಪೋತ್ಸವ ನಡೆಸಿಕೊಡಲಿದ್ದಾರೆ.
ಕಾರ್ಯಕ್ರಮ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಬಿ.ಪಿ.ಕುಲಕರ್ಣಿ ವಹಿಸಿಕೊಳ್ಳಲಿದ್ದು, ಮುಖ್ಯ ಅತಿಥಿಯಾಗಿ ಪುಸಭೆಯ ನಾಮನಿರ್ದೇಶಕ ಸದಸ್ಯರಾದ ರಾಜಶೇಖರ ಹೊಳಿ ಹಾಗೂ ಸಂಸ್ಥೆಯ ನಿರ್ದೇಶಕಿ ಲೀಲಾ ಭಟ್ಟ, ಆಡಳಿತಾಧಿಕಾರಿ ಶಾಂತಾ ಭಟ್ಟ ಸೇರಿದಂತೆ ಇತರರು ಉಪಸ್ಥಿತರಿರಲಿದ್ದಾರೆ ಎಂದು ಅಭಿಯಾನದ ಸಂಚಾಲಕ ರಾಮಚಂದ್ರ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
