ಸಿಂದಗಿ: ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-೫೦ರ ರಸ್ತೆಯಲ್ಲಿ ಗುರುವಾರ ನಸುಕಿನ ಜಾವದಲ್ಲಿ ಟಾಟಾ ಏಸ್ ವಾಹನ ಪಲ್ಟಿಯಾದ ಪರಿಣಾಮ ೧೫ಜನರು ಅಪಘಾತದಲ್ಲಿ ಗಾಯಗೊಂಡಿದ್ದಾರೆ.
ಇವರು ಹುನಗುಂದ ತಾಲೂಕಿನ ಬೆವಿನಾಳ ಗ್ರಾಮದಿಂದ ಅಫಜಲಪುರ ತಾಲೂಕಿನ ಘತ್ತರಗಿ ಭಾಗ್ಯವಂತಿದೇವಿ ದೇವಾಲಯಕ್ಕೆ ಜವಳ ತೆಗೆಯುವ ಕಾರ್ಯಕ್ರಮಕ್ಕೆ ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಹೊರಟಿರುವ ಸಂದರ್ಭದಲ್ಲಿ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಸಣ್ಣ ಪುಟ್ಟ ಗಾಯಗಳಾಗಿವೆ.
ಈ ವೇಳೆ ಲಕ್ಷ್ಮೀ ಚೇತನ ಸೇಗುಣಸಿ, ದ್ರಾಕ್ಷಾಯಿಣಿ ಮರತುಜಾ ಹಿರೇಮಠ, ಅನುರಾದಾ ದೇವಪ್ಪ ಮೇಟಿ, ನಿಲವ್ವ ಬಸಪ್ಪ ಮೇಟಿ ಸೇರಿದಂತೆ ಮಕ್ಕಳು ಸೇರಿ ೧೫ಜನರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆಗಾಗಿ ಸಿಂದಗಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲೆ ಮಾಡಲಾಗಿದೆ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

