Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಡೇಕನೂರದಲ್ಲಿ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ

ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಅವಶ್ಯಕ :ರಾಜುಗೌಡ

ಮಾ.೧೩ ರಂದು ಸಂಸ್ಕಾರ ಉತ್ಸವ ಹಾಗೂ ಪ್ರಶಸ್ತಿ ಪ್ರದಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೈನಿಕರಿಗೆ ಕೃತಜ್ಞತೆ ಸಲ್ಲಿಸಲು ಸಶಸ್ತ್ರ ಪಡೆಗಳ ಧ್ವಜ ಸದಾವಕಾಶ
(ರಾಜ್ಯ ) ಜಿಲ್ಲೆ

ಸೈನಿಕರಿಗೆ ಕೃತಜ್ಞತೆ ಸಲ್ಲಿಸಲು ಸಶಸ್ತ್ರ ಪಡೆಗಳ ಧ್ವಜ ಸದಾವಕಾಶ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಶಸ್ತ್ರ ಪಡೆಗಳ ಧ್ವಜ ದಿನ ಆಚರಣೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಭಿಮತ

ವಿಜಯಪುರ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಆಚರಿಸಲಾಯಿತು.
ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು, ಈ ಸಂದರ್ಭದಲ್ಲಿ ಸಶಸ್ತ್ರ ಪಡೆಗಳ ಸಾಂಕೇತಿಕ ಧ್ವಜ ಬಿಡುಗಡೆಗೊಳಿಸಿ, ನಂತರ ಸಾಂಕೇತಿಕವಾಗಿ ಧ್ವಜ ಸ್ವೀಕರಿಸಿ, ದೇಣಿಗೆ ನೀಡುವುದರ ಮೂಲಕ ಸಾರ್ವಜನಿಕರಿಗೆ ಧ್ವಜಗಳನ್ನು ಮಾರಾಟ ಮಾಡಿ ದೇಣಿಗೆ ಸಂಗ್ರಹಿಸುವ ಕಾರ್ಯಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯನ್ನು ದೇಶದ ಎಲ್ಲ ಭಾಗಗಳಲ್ಲಿ ಪ್ರತಿ ವರ್ಷ ಇದೇ ದಿನ ಡಿ.೭ರಂದು ಆಚರಿಸಲಾಗುತ್ತಿದೆ. ಸಶಸ್ತ್ರ ಪಡೆಗಳ ಧ್ವಜ ಬಿಡುಗಡೆ ಮಾಡಲಾಗುತ್ತದೆ. ಕೃತಜ್ಞತೆ ಸಲ್ಲಿಸಲು ಹಾಗೂ ಬೆಂಬಲ ವ್ಯಕ್ತಪಡಿಸಲು ಧ್ವಜ ದಿನಾಚರಣೆ ಒಂದು ಸದಾವಕಾಶ ಒದಗಿಸಿ ಕೊಡುತ್ತದೆ.ವೀರ ಯೋಧರ ಕುಟುಂಬಕ್ಕೆ ಬೆಂಬಲ ಒದಗಿಸಲು ಈ ದಿನಾಚರಣೆ ವೇದಿಕೆ.ಈ ನಿಧಿಯನ್ನು ಯುದ್ಧ ಸಂತ್ರಸ್ತರಿಗೆ, ಮಾಜಿ ಸೈನಿಕರು ಅವರ ಅವಲಂಬಿತರ ಸಲುವಾಗಿ ಹಮ್ಮಿಕೊಂಡ ವಿವಿಧ ಕಲ್ಯಾಣ ಮತ್ತು ಕ್ಷೇಮಾಭಿವೃದ್ಧಿ ಕಾರ್ಯಕ್ರಮಗಳಿಗೆ ವಿನಿಯೋಗಿಸಲಾಗುತ್ತಿದೆ.
ಜಿಲ್ಲಾ ಮಟ್ಟದಲ್ಲಿ ಸೈನಿಕ ಕಲ್ಯಾಣ ಇಲಾಖೆಯು ಕಾರ್ಯನಿರ್ವಹಿಸುತ್ತಿದೆ. ಜಿಲ್ಲೆಯ ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರ ಕುಟುಂಬಗಳಿಗೆ ಬಹಳಷ್ಟು ಕೆಲಸ ನಿರ್ವಹಿಸುತ್ತಿದೆ. ಮುಂಬರುವ ದಿನಗಳಲ್ಲಿ ಯೋಧರ ಹಾಗೂ ಅವರ ಕುಟುಂಬದ ದೃಷ್ಟಿಯಿಂದ ಇನ್ನೂ ರಚನಾತ್ಮಕವಾಗಿ ಕಾರ್ಯನಿರ್ವಹಿಸಬೇಕು. ಸೇವಾನಿರತರು ಹಾಗೂ ನಿವೃತ್ತ ಯೋಧರು ಹಾಗೂ ಅವರ ಅವಲಂಬಿತ ಕುಟುಂಬಕ್ಕೆ ಸಮಸ್ಯೆ ಉಂಟಾದರೆ ಅಧಿಕಾರಿ,ಸಿಬ್ಬಂದಿ ತಕ್ಷಣ ಸ್ಪಂದಿಸಬೇಕು. ಸಾರ್ವಜನಿಕರು ಧ್ವಜ ಖರೀದಿಸುವ ಮೂಲಕ ದೇಶದ ಸೈನಿಕರಿಗೆ ಬೆಂಬಲಿಸಬೇಕು ಎಂದು ಅವರು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಶ ಸೋನಾವಣೆ ಅವರು ಮಾತನಾಡಿ, ಮಾಜಿ ಸೈನಿಕರು ಮತ್ತು ಅವರ ಅವಲಂಬಿತರ ಸಲುವಾಗಿ ಹಮ್ಮಿಕೊಳ್ಳುವ ವಿವಿಧ ಕಲ್ಯಾಣ ಮತ್ತು ಕ್ಷೇಮಾಭಿವೃದ್ಧಿ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಧ್ವಜವನ್ನು ಹೆಚ್ಚೆಚ್ಚು ಖರೀದಿಸುವ ಮೂಲಕ ಕೈ ಜೋಡಿಸಬೇಕು ಎಂದು ಅವರು ಹೇಳಿದರು.
ಸೈನಿಕ ಶಾಲೆಯ ಪ್ರಾಂಶುಪಾಲರು ಗ್ರೂಪ್ ಕ್ಯಾಪ್ಟನ್ ಪ್ರತಿಭಾ ಬಿಷ್ಟ್, ಕರ್ನಲ್ ಭೀಮಾಶಂಕರ್ ಹಿಪ್ಪರಗಿ, ಸೈನಿಕ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಶ್ರೀಮತಿ ಜಿ.ಆರ್.ವಿನೂತ, ಮಾಜಿ ಸುಬೇದಾರ ಕ್ಯಾಪ್ಟನ್ ಸೂರ್ಯವಂಶಿ, ಶೇಗುಣಸಿ, ಲೆಫ್ಟಿನೆಂಟ್ ಎಂ.ಸುಭಾನಿ, ಆಯುಷ್ ಇಲಾಖೆಯ ಡಾ.ಎಸ್ ಆರ್. ಪಾಟೀಲ್ ಸೇರಿದಂತೆ ಇತರೆ ಮಾಜಿ ಸೈನಿಕರು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಡೇಕನೂರದಲ್ಲಿ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ

ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಅವಶ್ಯಕ :ರಾಜುಗೌಡ

ಮಾ.೧೩ ರಂದು ಸಂಸ್ಕಾರ ಉತ್ಸವ ಹಾಗೂ ಪ್ರಶಸ್ತಿ ಪ್ರದಾನ

ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ದೊಡ್ಡದು :ಡಾ.ಭುವನೇಶ್ವರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಡೇಕನೂರದಲ್ಲಿ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಅವಶ್ಯಕ :ರಾಜುಗೌಡ
    In (ರಾಜ್ಯ ) ಜಿಲ್ಲೆ
  • ಮಾ.೧೩ ರಂದು ಸಂಸ್ಕಾರ ಉತ್ಸವ ಹಾಗೂ ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ದೊಡ್ಡದು :ಡಾ.ಭುವನೇಶ್ವರಿ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಹೋಟೆಲ್ ಗೆ ಬೆಂಕಿ! :ಅಪಾರ ಹಾನಿ
    In (ರಾಜ್ಯ ) ಜಿಲ್ಲೆ
  • ಸನಾತನ ಹಿಂದೂ ಧರ್ಮ ವಿಶ್ವದ ಶ್ರೇಷ್ಠ ಧರ್ಮ :ದಾಮೋದರ
    In (ರಾಜ್ಯ ) ಜಿಲ್ಲೆ
  • ಬಿಸಿಲಲ್ಲಿ ಪ್ರಾಣಿ-ಪಕ್ಷಿಗಳ ದಾಹ ತಣಿಸುತ್ತಿರುವ ಪಟೇಲ್
    In (ರಾಜ್ಯ ) ಜಿಲ್ಲೆ
  • ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ನೆಮ್ಮದಿ :ಗಣಾಚಾರಿ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಮಾದಿಗ ಸಮುದಾಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.