Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕರುನಾಡು ಜನತೆಗೆ ವರವಾದ ಪಂಚ ಗ್ಯಾರಂಟಿ ಯೋಜನೆಗಳು

ದಿವ್ಯಾಂಗರ ವಾಲಿಬಾಲ್ ನಲ್ಲಿ ಮಿಂಚಿದ ಯಮನಪ್ಪ

ಮಕ್ಕಳೆ ಮೊಬೈಲ್‌ ಬಿಟ್ಟು ಪುಸ್ತಕ ಹಿಡಿಯಿರಿ :ಮಲ್ಲಿಬೊಮ್ಮ ಶ್ರೀ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರ ವಿಫಲ: ರಾಜ್ಯಪಾಲರಿಗೆ ಹೆಚ್ಡಿಕೆ ದೂರು
(ರಾಜ್ಯ ) ಜಿಲ್ಲೆ

ಸರ್ಕಾರ ವಿಫಲ: ರಾಜ್ಯಪಾಲರಿಗೆ ಹೆಚ್ಡಿಕೆ ದೂರು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬೆಂಗಳೂರು: ರಾಜ್ಯಾದ್ಯಂತ ಜೆಡಿಎಸ್ ಪಕ್ಷ ನಡೆಸಿದ್ದ ಬರ ಅಧ್ಯಯನ ವರದಿಯನ್ನು ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು, ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರಿಗೆ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಬರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಕೇಂದ್ರದಿಂದ ಅನುದಾನ ಕೊಡಿಸಲು ಕೂಡಲೇ ಮಧ್ಯಪ್ರವೇಶ ಮಾಡಬೇಕೆಂದು ಮನವಿ ಮಾಡಿದ್ದಾರೆ.
ಈ ವೇಳೆ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ರಾಜ್ಯಪಾಲರು, ನಿಮ್ಮ ಅಹವಾಲನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು. ರಾಜ್ಯ ಎದುರಿಸುತ್ತಿರುವ ತೀವ್ರ ಪರಿಸ್ಥಿತಿಯನ್ನು ಕೇಂದ್ರದ ಗಮನಕ್ಕೆ ತರುವುದಾಗಿ ತಿಳಿಸಿದರು.
ಮಾನ್ಸೂನ್ ವೈಫಲ್ಯದಿಂದ ರಾಜ್ಯದಲ್ಲಿ ಒಟ್ಟು 48.15 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಈ ಪೈಕಿ 46.09 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾಗೂ 2.06 ಲಕ್ಷ ಹೆಕ್ಟೇರ್ ತೋಟಗಾರಿಕೆ ಬೆಳೆ ನಾಶವಾಗಿದೆ. ರಾಜ್ಯ ಸರಕಾರವೇ ಅಂದಾಜು ಮಾಡಿರುವಂತೆ ರಾಜ್ಯದಲ್ಲಿ ಒಟ್ಟು 35.162.02 ಕೋಟಿ ರೂಪಾಯಿಯಷ್ಟು ಬೆಳೆ ಹಾನಿ ಆಗಿದ್ದು, ಎನ್ ಸಿಆರ್ ಎಫ್ ಮಾನದಂಡದ ಅಡಿಯಲ್ಲಿ ಕೇಂದ್ರ ಸರಕಾರದಿಂದ 18,171.44 ಕೋಟಿ ರೂಪಾಯಿ ಪರಿಹಾರವನ್ನು ರಾಜ್ಯ ಸರಕಾರ ಕೋರಿದೆ. ಆದರೆ, ಇಷ್ಟು ಮೊತ್ತದ ಪರಿಹಾರದಿಂದ ರಾಜ್ಯದ ರೈತರ ಬವಣೆ ನೀಗುವುದಿಲ್ಲ. ಕೃಷಿಕರು ಅನುಭವಿಸಿರುವ ಒಟ್ಟಾರೆ ನಷ್ಟದಲ್ಲಿ ಶೇ.10ರಷ್ಟು ಪರಿಹಾರವೂ ಅವರಿಗೆ ಸಿಗುವುದಿಲ್ಲ. ಆದ್ದರಿಂದ ಈ ಹಿಂದೆ ನೀಡದಂತೆ ಪ್ರತಿ ಹೆಕ್ಟೇರ್ ಬೆಳೆ ನಾಶಕ್ಕೆ ಹೆಚ್ಚುವರಿ ಪರಿಹಾರವಾಗಿ 17,500 ರೂಪಾಯಿ ನೀಡಬೇಕು. ಈ ನಿಟ್ಟಿನಲ್ಲಿ ತಾವು ರಾಜ್ಯ ಸರಕಾರಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು ಎಂದು ಕುಮಾರಸ್ವಾಮಿ ಅವರು ಮನವಿ ಮಾಡಿದ್ದರು.
ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಹಾಗೂ ಪರಿಹಾರ ಕ್ರಮ ಕೈಗೊಳ್ಳುವಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ. ಅನೇಕ ಜಿಲ್ಲೆಗಳಲ್ಲಿ ಕುಡಿಯುವ ಸಮಸ್ಯೆ ಇದೆ. ಜಾನುವಾರುಗಳು ಕೂಡ ಸಂಕಷ್ಟದಲ್ಲಿವೆ. ರಾಜಧಾನಿ ಬೆಂಗಳೂರಿನಲ್ಲಿಯೂ ನೀರಿನ ಸಂಕಷ್ಟ ಎದುರಾಗಿದೆ ಎಂದು ಇದೇ ವೇಳೆ ಆರೋಪಿಸಿದರು.
ರಾಜ್ಯ ಸರಕಾರ ಬರ ಪರಿಸ್ಥಿತಿಯನ್ನು ಬಹಳ ಅಸಡ್ಡೆಯಿಂದ ನೋಡುತ್ತಿದೆ. ತೀವ್ರ ನಷ್ಟ ಅನುಭವಿಸಿದ ರೈತರಿಗೆ ಬರ ಪರಿಹಾರ ನೀಡದೆ ರಾಜ್ಯ ಸರಕಾರ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ ಎಂಬ ಅಂಶವನ್ನು ರಾಜ್ಯಪಾಲರ ಗಮನಕ್ಕೆ ತಂದರು.
ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸರಣಿ ಆರಂಭವಾಗಿದೆ. ಕಳೆದ ಆರು ತಿಂಗಳಿನಿಂದ ರಾಜ್ಯ ಸರಕಾರ ರೈತರ ಬಗ್ಗೆ ಎಳ್ಳಷ್ಟೂ ಕಾಳಜಿ ವಹಿಸಿಲ್ಲ. ರಾಜಕೀಯದಲ್ಲಿ ಮೈ ಮರೆತಿದೆ ಎಂದು ಅವರು ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕರುನಾಡು ಜನತೆಗೆ ವರವಾದ ಪಂಚ ಗ್ಯಾರಂಟಿ ಯೋಜನೆಗಳು

ದಿವ್ಯಾಂಗರ ವಾಲಿಬಾಲ್ ನಲ್ಲಿ ಮಿಂಚಿದ ಯಮನಪ್ಪ

ಮಕ್ಕಳೆ ಮೊಬೈಲ್‌ ಬಿಟ್ಟು ಪುಸ್ತಕ ಹಿಡಿಯಿರಿ :ಮಲ್ಲಿಬೊಮ್ಮ ಶ್ರೀ

ಸಾಮಾಜಿಕ ನ್ಯಾಯ ಬಡಜನತೆಯ ಕಲ್ಯಾಣದ ಬಜೆಟ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕರುನಾಡು ಜನತೆಗೆ ವರವಾದ ಪಂಚ ಗ್ಯಾರಂಟಿ ಯೋಜನೆಗಳು
    In ವಿಶೇಷ ಲೇಖನ
  • ದಿವ್ಯಾಂಗರ ವಾಲಿಬಾಲ್ ನಲ್ಲಿ ಮಿಂಚಿದ ಯಮನಪ್ಪ
    In (ರಾಜ್ಯ ) ಜಿಲ್ಲೆ
  • ಮಕ್ಕಳೆ ಮೊಬೈಲ್‌ ಬಿಟ್ಟು ಪುಸ್ತಕ ಹಿಡಿಯಿರಿ :ಮಲ್ಲಿಬೊಮ್ಮ ಶ್ರೀ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ನ್ಯಾಯ ಬಡಜನತೆಯ ಕಲ್ಯಾಣದ ಬಜೆಟ್
    In (ರಾಜ್ಯ ) ಜಿಲ್ಲೆ
  • ಆರ್ಥಿಕತೆಯಲ್ಲಿ ಯಾವ ಬದಲಾವಣೆಯೂ ಕಾಣದ ಬಜೆಟ್
    In (ರಾಜ್ಯ ) ಜಿಲ್ಲೆ
  • ವಚನ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ
    In (ರಾಜ್ಯ ) ಜಿಲ್ಲೆ
  • ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಬಜೆಟ್ ಪ್ರತಿಕ್ರಿಯೆಗಳು
    In (ರಾಜ್ಯ ) ಜಿಲ್ಲೆ
  • ಬಜೆಟ್: ಮುಖ್ಯಮಂತ್ರಿಗಳಿಂದ ದಲಿತ ವರ್ಗಕ್ಕೆ ದೊಡ್ಡ ದ್ರೋಹ
    In (ರಾಜ್ಯ ) ಜಿಲ್ಲೆ
  • ಬಜೆಟ್ನಲ್ಲಿ ವಿಜಯಪುರ ಸಂಪೂರ್ಣ ನಿರ್ಲಕ್ಷ್ಯ :ಕೇಶವ ಪ್ರಸಾದ್
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.