ಸಿಂದಗಿ: ಭವ್ಯ ಭಾರತದ ನಿರ್ಮಾಣ ಮಾಡುವಲ್ಲಿ ಮತದಾನ ಪ್ರಕ್ರಿಯೆ ಪ್ರಮುಖವಾಗಿದೆ ಎಂದು ತಾಲೂಕು ಪಂಚಾಯತ್ ಇಓ ರಾಮು ಅಗ್ನಿ ಹೇಳಿದರು.
ಪಟ್ಟಣದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಸತಿ ನಿಲಯಕ್ಕೆ ಭೇಟಿ ನೀಡಿ ಸ್ವೀಪ್ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ೧೮ವರ್ಷ ಪೂರೈಸಿದ ಎಲ್ಲಾ ವಿದ್ಯಾರ್ಥಿಗಳು ನಮೂನೆ ೬ರ ಅರ್ಜಿಯನ್ನು ಸಲ್ಲಿಸುವ ಮೂಲಕ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಸದೃಢ ರಾಷ್ಟ್ರ ನಿರ್ಮಾಣಕ್ಕೆ ಸಹಕರಿಸಿ ಎಂದರು.
ಇದೇ ಸಂದರ್ಭದಲ್ಲಿ ವಸತಿ ನಿಲಯದ ಸಹಾಯಕ ನಿರ್ದೇಶಕ ರವೀಂದ್ರ ಬಂಥನಾಳ, ಭೀಮರಾಯ ಚೌಧರಿ, ಬಸವರಾಜ್ ಹುಣಸಗಿ ಸೇರಿದಂತೆ ವಸತಿ ನಿಲಯದ ಮೇಲ್ವಿಚಾರಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

