ವಿಜಯಪುರ: ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ವತಿಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾಗಾAಧಿ ವಸತಿ ಶಾಲೆಗಳಲ್ಲಿ ೨೦೨೪-೨೫ನೇ ಶೈಕ್ಷಣಿಕ ಸಾಲಿಗೆ ೬ನೇ ತರಗತಿ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ೨೦೨೪ರ ಫೆಬ್ರುವರಿ ೧೮ರಂದು ನಡೆಸಲಿರುವ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸ್ತುತ ೫ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹತ್ತಿರದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ,http://kea.kar.nic.in ನಲ್ಲಿ ಮತ್ತು ವಸತಿ ಶಿಕ್ಷಣ ಸಂಸ್ಥೆಗಳ ವೆಬ್‌ಸೈಟ್ http://kreis.kar.nic.in ಡಾ.ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಲ್ಲಿ ಡಿ.೭ ರಿಂದ ೩೧ರವರೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಮಾಹಿತಿ ಪುಸ್ತಕ-೨೦೨೪ನ್ನು ಪ್ರಾಧಿಕಾರದ ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಪ್ರವೇಶ ಪತ್ರವನ್ನು ದಿನಾಂಕ : ೦೧-೦೨-೨೦೨೪ರಂದು ಅರ್ಜಿ ಸಲ್ಲಿಸಿದ ವಸತಿ ಶಾಲೆಯಿಂದ ಪಡೆದುಕೊಳ್ಳಬಹುದಾಗಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ವಸತಿ ಶಾಲೆ ಹಾಗೂ ವೆಬ್‌ಸೈಟ್‌ಗಳನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
