ಮುದ್ದೇಬಿಹಾಳ: ತಾಲೂಕಿನ ಬಳವಾಟ ಗ್ರಾಮದ ಕಂಠಿ ಬಸವೇಶ್ವರ ದೇವಸ್ಥಾನದಲ್ಲಿ ಡಿ.೯ ರಂದು ರಂಭಾಪುರಿ ಜಗದ್ಗುರುಗಳಿಂದ ಇಷ್ಟಲಿಂಗ ಮಹಾಪೂಜೆ ಹಾಗೂ ಲಿಂ.ಸದಾನಂದ ಶಿವಾಚಾರ್ಯ ಮಹಾಸ್ವಾಮಿಗಳ ಪುಣ್ಯ ಸ್ಮರಣೋತ್ಸವದ ಅಂಗವಾಗಿ ೫೦೧ ಸುಮಂಗಲೆಯರಿಗೆ ಉಡಿ ತುಂಬುವ ಮತ್ತು ಸಾಮೂಹಿಕ ವಿವಾಹ, ಧರ್ಮಸಭೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಬೆ೮ ಕ್ಕೆ ಇಷ್ಟಲಿಂಗ ಮಹಾಪೂಜೆ, ೧೧ಕ್ಕೆ ಸುಮಂಗಲೆಯರ ಉಡಿ ತುಂಬುವ ಕಾರ್ಯಕ್ರಮ, ೧೨ಕ್ಕೆ ಸಾಮೂಹಿಕ ವಿವಾಹ ಹಾಗೂ ಧರ್ಮಸಭೆ ಸಂಜೆ ೪ಕ್ಕೆ ಅರುಣೋದಯ ಸಾಂಸ್ಕೃತಿಕ ಕಲಾ ತಂಡದಿಂದ ಜಾನಪದ ಜಾತ್ರೆ ಕಾರ್ಯಮಗಳು ಜರುಗಲಿವೆ. ಸಮಸ್ತ ಸದ್ಭಕ್ತರು ಭಾಗಿಯಾಗಿ ತನು-ಮನ-ಧನದಿಂದ ಸೇವೆ ಸಲ್ಲಿಸುವಂತೆ ಆಯೋಜಕರು ಕೋರಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
