ವಿಜಯಪುರ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ ೩೭೦ ನೇ ವಿಧಿ ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರಿಂಕೋರ್ಟ್ ಪಂಚ ಸದಸ್ಯರ ಸಾಂವಿಧಾನಿಕ ಪೀಠ ಎತ್ತಿ ಹಿಡಿದಿರುವುದು ಸತ್ಯ ಹಾಗೂ ಜನಹಿತಕ್ಕೆ ಸಂದ ಜಯವಾಗಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಭಾರತೀಯ ನ್ಯಾಯದಾನ ವ್ಯವಸ್ಥೆ ಅತ್ಯಂತ ಶ್ರೇಷ್ಠ, ಸುಪ್ರೀಂಕೋರ್ಟ್ ತೀರ್ಪಿನಿಂದ ಪ್ರತಿಯೊಬ್ಬ ಭಾರತೀಯರಿಗೂ ಅತ್ಯಂತ ಸಂತೋಷವಾಗಿದೆ. ಕಣಿವೆ ರಾಜ್ಯ ಕಾಶ್ಮೀರ ಪ್ರಗತಿಯಾಗಲು ಈ ವಿಧಿ ರದ್ದಾಗುವುದು ಅವಶ್ಯಕವಾಗಿತ್ತು, ಹೀಗಾಗಿ ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರ ಈ ವಿಧಿ ರದ್ದುಗೊಳಿಸುವ ಮೂಲಕ ದಿಟ್ಟ ಹೆಜ್ಜೆ ಇರಿಸಿತ್ತು, ಆ ಮೂಲಕ ಕಾಶ್ಮೀರ ಪ್ರಗತಿಗೆ ಹೊಸ ಶಕೆ ಆರಂಭವಾದಂತಾಯಿತು, ಆದರೆ ಕೆಲವರು ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಲೇರಿದ್ದರು, ಈ ಬಗ್ಗೆ ವಾದ-ಪ್ರತಿವಾದ ಆಲಿಸಿದ ಸುಪ್ರೀಂಕೋಟ್ ಪಂಚ ಸದಸ್ಯರ ನ್ಯಾಯಪೀಠವು ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ ೩೭೦ ನೇ ವಿಧಿ ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದೆ, ಇದು ಸತ್ಯ ಹಾಗೂ ಜನರ ಹಿತರಕ್ಷಣೆಗಾಗಿ ಕೈಗೊಂಡ ಸರ್ಕಾರದ ಕ್ರಮಕ್ಕೆ ಜಯ ದೊರಕಿದಂತಾಗಿದೆ ಎಂದು ಅವರು ಹೇಳಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

