ಸಿಂದಗಿ: ಡಿ.೧೩ರಂದು ಬೆಳಿಗ್ಗೆ ೧೦ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದ ಅಧಿವೇಶನದ ಸಂದರ್ಭದಲ್ಲಿ ಗಾಂಧಿ ಭವನದಿಂದ ರ‍್ಯಾಲಿ ಮೂಲಕ ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಪಂಚಮಸಾಲಿ, ಗೌಡ, ಮಲೆಗೌಡ, ದೀಕ್ಷ ಲಿಂಗಾಯತರಿಗೆ ೨ಎ ಮೀಸಲಾತಿ ಅನುಷ್ಠಾನ ಹಾಗೂ ಲಿಂಗಾಯತ ಉಪ ಸಮಾಜಗಳಿಗೆ ಒಬಿಸಿ ಮೀಸಲಾತಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯಿಸಿ, ರಾಜ್ಯ ಸರ್ಕಾರ ತೊರಿಸುತ್ತಿರುವ ನಿರ್ಲಕ್ಷಕ್ಕೆ ಅಸಮಾಧಾನಗೊಂಡು ಕೂಡಲಸಂಗಮ ಗುರುಪೀಠದ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಬೃಹತ್ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದ್ದು, ಕಾರಣ ಸಿಂದಗಿ ತಾಲೂಕಿನ ಪಂಚಮಸಾಲಿ ಸಮಾಜದ ಬಂಧುಗಳು ಸ್ವಯಂ ಪ್ರೇರಿತರಾಗಿ ಮೀಸಲಾತಿ ಹೋರಾಟದಲ್ಲಿ ಭಾಗವಹಿಸುವಂತೆ ಸಮಾಜದ ಅಧ್ಯಕ್ಷ ಎಂ.ಎಂ.ಹಂಗರಗಿ, ಕಾರ್ಯದರ್ಶಿ ಆನಂದ ಶಾಬಾದಿ ಹಾಗೂ ಮೀಸಲಾತಿ ಹೋರಾಟ ಸಮಿತಿ ಗೌರವಾಧ್ಯಕ್ಷ ಚಂದ್ರಶೇಖರ ನಾಗರಬೆಟ್ಟ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
