ಡಿ.೧೧ರಿಂದ ೧೬ರವರೆಗೆ ಡಿಇಎಲ್ ಇಡಿ ಹಾಗೂ ಡಿಪಿಎಸ್‌ಇ ಪೂರಕ ಪರೀಕ್ಷೆ
ವಿಜಯಪುರ: ನಗರದ ಮನಗೂಳಿ ರಸ್ತೆಯಲ್ಲಿರುವ ಸರಕಾರಿ ಉರ್ದು ಟಿಟಿಐ ಕಾಲೇಜ್‌ನಲ್ಲಿ ಡಿಸೆಂಬರ್ ೧೧ ರಿಂದ ೧೬ರವರೆಗೆ ಪ್ರಥಮ ಮತ್ತು ದ್ವಿತೀಯ ಡಿ.ಇಎಲ್.ಇಡಿ ಹಾಗೂ ಡಿ.ಪಿ.ಎಸ್.ಇ ಪೂರಕ ಪರೀಕ್ಷೆ ಜರುಗಲಿದ್ದು, ಪಾರದರ್ಶಕ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅನುಕೂಲವಾಗುವಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ೨೦೦ ಮೀ. ಪ್ರದೇಶವನ್ನು ಕಲಂ ೧೪೪ರನ್ವಯ ನಿಷೇಧಿತ ಪ್ರದೇಶವೆಂದು ಘೋಷಿಸಿ, ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ಫೋನ್ ತರುವುದು ಮತ್ತು ಬಳಸುವುದು ನಿಷೇಧಿಸಲಾಗಿದೆ. ಪರೀಕ್ಷಾ ದಿನಗಳಂದು ಬೆಳಿಗ್ಗೆ ೮ ಗಂಟೆಯಿಂದ ಪರೀಕ್ಷೆ ಮುಕ್ತಾಯವಾಗುವವರೆಗೆ ಕೇಂದ್ರದ ವ್ಯಾಪ್ತಿಯಲ್ಲಿನ ಝರಾಕ್ಸ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ತೆರೆಯದಂತೆ ಆದೇಶಿಸಲಾಗಿದೆ.

