ವಿಜಯಪುರ: ಜಿಲ್ಲೆಯಲ್ಲಿ ಡಿ.೯ರಂದು ನಡೆದ ರಾಷ್ಟ್ರೀಯ ಲೋಕ್ ಅದಾಲತ್ ಯಶಸ್ವಿಯಾಗಿದ್ದು, ಕಕ್ಷಿದಾರರು ಹಾಗೂ ವಕೀಲರ ಸಹಕಾರದಿಂದ ಈ ಅದಾಲತ್‌ನಲ್ಲಿ ೧೮೪ ಸಿವಿಲ್ ದಾವೆಗಳು, ೧೮೨ ಚೆಕ್ ಬೌನ್ಸ್ ಪ್ರಕರಣಗಳು, ೧೫೨ ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣ ಹಾಗೂ ೧೧ ಕೌಟುಂಬಿಕ ಪ್ರಕರಣಗಳು ಮತ್ತು ೯೭ ರಾಜಿಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇದ್ದ ಒಟ್ಟು ೧೧೪೪೧ ಪ್ರಕರಣಗಳು ಮತ್ತು ೧,೪೧,೦೮೩ ವ್ಯಾಜ್ಯ ಪೂರ್ವ ಪ್ರಕರಣಗಳು ಮುಕ್ತಾಯಗೊಂಡಿವೆ.
ರಾಷ್ಟ್ರೀಯ ಲೋಕ್ ಅದಾಲತನ ಯಶಸ್ಸಿಗೆ ಸಹಕರಿಸಿದ ವಕೀಲರು, ಕಕ್ಷಿದಾರರು, ವಿಮಾ ಕಂಪನಿಯ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳಿಗೆ ಮತ್ತು ರಾಷ್ಟ್ರೀಯ ಲೋಕ್ ಅದಾಲತ್ ಪ್ರಚಾರದಲ್ಲಿ ಸಹಭಾಗಿಯಾದವರಿಗೆ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಿವಾಜಿ ಅನಂತ ನಲವಡೆ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ ಕುಂದರ ಅವರು ಅಭಿನಂದನೆ ಸಲ್ಲಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
